ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಅವರು, ರಾಜ್ಯ ಸರ್ಕಾರ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ನೀಡುತ್ತಿದ್ದು ಅಂಗನವಾಡಿ ಕೇಂದ್ರಗಳಿಗೂ ವಿದ್ಯುತ್ ಸೌಲಭ್ಯ ಒದಗಿಸಬೇಕೆಂದು ಮನವಿ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ರಾಜ್ಯದಲ್ಲಿ ಎಷ್ಟು ಅಂಗನವಾಡಿಗಳಿವೆ. ವಿದ್ಯುತ್ ಗೆ ಎಷ್ಟು ವೆಚ್ಚ ಆಗುತ್ತದೆ. ಎನ್ನುವ ಕುರಿತು ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.