ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಜಿಎಸ್ ಟಿ ಕೌನ್ಸಿಲ್ ನ 54 ನೇ ಸಭೆ ಇಂದು ಧಾರ್ಮಿಕ ಪ್ರವಾಸಗಳ ಹೆಲಿಕಾಪ್ಟರ್ ಸೇವೆಗಳಿಗೆ ಜಿಎಸ್ ಟಿಯನ್ನು ಶೇ.5 ಕ್ಕೆ ಇಳಿಕೆ ಮಾಡಲು ನಿರ್ಧಾರ ಕೈಗೊಂಡಿದೆ ಎಂದು ಉತ್ತರಾಖಂಡ್ ನ ಆರ್ಥಿಕ ಸಚಿವ ಪ್ರೇಮ್ ಚಂದ್ ಅಗರ್ವಾಲ್ ಹೇಳಿದ್ದಾರೆ.
ಕೇದಾರನಾಥ, ಬದರಿನಾಥ್ ನಂತಹ ಧಾರ್ಮಿಕ ಉದ್ದೇಶಗಳಿಗೆ ಹೆಲಿಕಾಪ್ಟರ್ ಸೇವೆಗಳನ್ನು ಬಳಸುವುದಕ್ಕೆ ಈಗ ಶೇ.18 ರಷ್ಟು ಜಿಎಸ್ ಟಿ ವಿಧಿಸಲಾಗುತ್ತಿದೆ. ಇನ್ನು ಮುಂದೆ ಅದನ್ನು ಶೇ.5ಕ್ಕೆ ಇಳಿಕೆ ಮಾಡಲಾಗುತ್ತದೆ ಎಂದು ಅಗರ್ವಾಲ್ ಹೇಳಿದ್ದಾರೆ.
ಕೌನ್ಸಿಲ್ ಜೀವ ಮತ್ತು ಆರೋಗ್ಯ ವಿಮಾ ಕಂತುಗಳ ಮೇಲಿನ ತೆರಿಗೆಗಳನ್ನು ಕಡಿಮೆ ಮಾಡುವುದು, ಹಾಗೆಯೇ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳ ಮೂಲಕ ರೂ 2,000 ವರೆಗಿನ ಸಣ್ಣ ಡಿಜಿಟಲ್ ವಹಿವಾಟುಗಳಿಗೆ ಪಾವತಿ ಅಗ್ರಿಗೇಟರ್‌ಗಳ ಮೇಲೆ ಜಿಎಸ್‌ಟಿ ವಿಧಿಸುವುದು ಸೇರಿದಂತೆ ಹಲವಾರು ಸಮಸ್ಯೆಗಳ ಕುರಿತು ಚರ್ಚಿಸಲು ನಿರ್ಧರಿಸಲಾಗಿದೆ.