ಇನ್ನು ಮುಂದೆ ನಾನು ಪ್ರಧಾನಿಯನ್ನು 28 ಪೈಸೆ ಪಿಎಂ ಎಂದು ಕರೆಯುತ್ತೇನೆ: ಉದಯನಿಧಿ ಸ್ಟ್ಯಾಲಿನ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮನಾಥಪುರಂ ಮತ್ತು ಥೇಣಿಯಲ್ಲಿ ಪ್ರತ್ಯೇಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಲೇವಡಿ ಮಾಡಿದ್ದು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಚಿವ ಹಾಗೂ ಡಿಎಂಕೆ ನಾಯಕ ಉದಯನಿಧಿ ಸ್ಟ್ಯಾಲಿನ್‌ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ತಮಿಳುನಾಡಿಗೆ ಸಿಗಬೇಕಾದ ಸಂಪನ್ಮೂಲಗಳು ಸಿಗುತ್ತಿಲ್ಲ ಎಂದು ಕಿಡಿಕಾರಿರುವ ಸ್ಟ್ಯಾಲಿನ್‌, ತಮಿಳುನಾಡು ಕಟ್ಟುವ ಪ್ರತಿ ರೂಪಾಯಿ ತೆರಿಗೆಗೆ ಕೇಂದ್ರ ಸರ್ಕಾರ ನಮಗೆ ಕೇವಲ 28 ಪೈಸೆ ನೀಡುತ್ತಿದೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಿಗೆ ಹೆಚ್ಚು ಹಣ ಸಿಗಲಿದೆ ಎಂದರು. ಇನ್ನು ಮುಂದೆ ಪ್ರಧಾನಿಯವರನ್ನು 28 ಪೈಸೆ ಪ್ರಧಾನಿ ಎಂದು ಕರೆಯಬೇಕು ಎಂದು ಹೇಳಿಕೆ ನೀಡಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ಉದಯನಿಧಿ ಸ್ಟ್ಯಾಲಿನ್‌ ವಾಗ್ದಾಳಿ ಮುಂದುವರಿಸಿದ್ದು, ತಮಿಳುನಾಡಿನಲ್ಲಿ ಮಕ್ಕಳ ಭವಿಷ್ಯವನ್ನು ನಾಶಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಜಾರಿಗೊಳಿಸುತ್ತಿದೆ ಎಂದು ಆರೋಪಿಸಿದರು. ತಮಿಳುನಾಡಿಗೆ ಹಣ ಹಂಚಿಕೆ, ಅಭಿವೃದ್ಧಿ ಯೋಜನೆಗಳು ಹಾಗೂ ರಾಜ್ಯದಲ್ಲಿ ನೀಟ್ ನಿಷೇಧ ವಿಚಾರದಲ್ಲಿ ಕೇಂದ್ರ ತಾರತಮ್ಯ ಮಾಡುತ್ತಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!