ಇನ್ಮುಂದೆ ನಾನು ಹಾರ-ತುರಾಯಿ, ಶಾಲು-ಶಲ್ಯ ಸ್ವೀಕಾರ ಮಾಡಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೇ ಕ್ಷಣಗಳ ಹಿಂದೆ ನನಗೆ ಜೀರೋ ಟ್ರಾಫಿಕ್ ಬೇಡವೆಂದು ಹೇಳಿದ್ದು, ಇದೀಗ ಹಾರ, ತುರಾಯಿ ಹಾಗೂ ಶಲ್ಯಗಳನ್ನು ಸ್ವೀಕಾರ ಮಾಡುವುದಿಲ್ಲ ಎಂದು ತೀರ್ಮಾನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯವಾಗಲಿದೆ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!