Friday, December 8, 2023

Latest Posts

ಇನ್ಮುಂದೆ ರಾಜ್ಯದ ಶಾಲೆ, ಕಾಲೇಜುಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದುವುದು ಕಡ್ಡಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಇನ್ನುಮುಂದೆ ರಾಜ್ಯದ ಶಾಲೆ, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವುದನ್ನು ರಾಜ್ಯ ಸರ್ಕಾರ ಕಡ್ಡಾಯ ಮಾಡಲು ಮುಂದಾಗಿದೆ.

ಈ ಕುರಿತು ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಸೂಚನೆ ನೀಡಿದ್ದಾರೆ.

ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ‌ ಎಲ್ಲರೂ ಸಂವಿಧಾನ ತೋರಿದ ಮಾರ್ಗದಲ್ಲಿ ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

‘ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರು ಇಂದು ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ‌ ಎಲ್ಲರೂ ಸಂವಿಧಾನ ತೋರಿದ ಮಾರ್ಗದಲ್ಲಿ ಕೆಲಸ ಮಾಡಲು ಸೂಚಿಸಿದರು. ಇದೇ ವೇಳೆ ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಹೇಳಿಸುವುದಕ್ಕೆ ಪೂರಕವಾಗಿ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು’ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಟ್ವಿಟರ್​ ಹ್ಯಾಂಡಲ್​ನಿಂದ ಟ್ವೀಟ್ ಮಾಡಲಾಗಿದೆ.

https://twitter.com/CMahadevappa/status/1664234613844361216?ref_src=twsrc%5Etfw%7Ctwcamp%5Etweetembed%7Ctwterm%5E1664234613844361216%7Ctwgr%5E8263a6fe462c2552b0dd7408c7ec547b0c065a18%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fkarnataka-social-welfare-minister-hc-mahadevappa-instructs-officials-to-implement-daily-constitution-preamble-reading-in-schools-gsp-592094.html

ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವರು, ರಾಜ್ಯದ ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಓದಲು ಮತ್ತು ಅರ್ಥೈಸಲು ಆದೇಶಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ ಎಂದು ಉಲ್ಲೇಖಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!