ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೇವಸ್ಥಾನಗಳಿಗೆ ತೆರಳುವ ಭಕ್ತರಿಗೆ ಬೇಸಿಗೆಯ ಬಿಸಿಲ ಸಂದರ್ಭ ನೆರಳಿನ ವ್ಯವಸ್ಥೆ ಮಾಡುವುದಾಗಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಭಕ್ತರಿಗೆ ನೆರಳಿನ ವ್ಯವಸ್ಥೆ ಕಲ್ಪಿಸಲು ಇಲಾಖೆ ಮುಂದಾಗಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ, ದೇವರ ದರುಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವವರಿಗೆ ನೆರಳಿನಲ್ಲಿ ಕುಳಿತು ವಿಶ್ರಮಿಸಿಕೊಳ್ಳಲು ವ್ಯವಸ್ಥೆ ಮಾಡುವುದು, ದೇವಸ್ಥಾನದ ಸುತ್ತಲೂ ತಾತ್ಕಾಲಿಕ ಪೆಂಡಾಲ್ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.