ಇನ್ಮುಂದೆ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಲ್ಲಿ ಈ ಆಚರಣೆಗಳು ನಿಷೇಧ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ಅಡಿಯ ಬರುವ ಎಲ್ಲ ದೇವಾಲಯಗಳಲ್ಲಿ ಇನ್ಮುಂದೆ ಈ ಹಿಂದಿನಿಂದ ನಡೆಸಿಕೊಂಡು ಬರುತ್ತಿರುವ ರೂಢಿ ಸಂಪ್ರದಾಯಗಳನ್ನು ಮುಂದುವರೆಸಿಕೊಂಡು ಹೋಗುವುದು. ಅದರ ಹೊರತಾಗಿ ಯಾವುದೇ ಜಯಂತಿಗಳನ್ನು ಆಚರಿಸುವಂತಿಲ್ಲ,ಮುದ್ರಾಧಾರಣೆ, ಪೋಟೋಗಳನ್ನು ಅಳವಡಿಸುವಂತಿಲ್ಲ ಎಂಬುದಾಗಿ ಇಲಾಖೆ ಆದೇಶ ಹೊರಡಿಸಿದೆ.

ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು, ಇತ್ತೀಚಿನ ದಿನಗಳಲ್ಲಿ ದೇವಾಲಯಗಳಲ್ಲಿ ನಡೆದು ಬಂದಿರುವ ಪದ್ದತಿಗಳನ್ನ ಬಿಟ್ಟು, ಅದಕ್ಕೆ ವಿರುದ್ಧವಾದ ಧಾರ್ಮಿಕ ಆಚರಣೆಗಳನ್ನು ನಡೆಸಲಾಗುತ್ತಿದೆ. ನಾಮಫಲಕ, ಪೋಟೋ ಇತ್ಯಾದಿಗಳನ್ನು ಅಳವಡಿಸುತ್ತಿರುವು ಬಗ್ಗೆ ಆಕ್ಷೇಪ, ದೂರುಗಳು ಬಂದಿವೆ ಎಂದು ಹೇಳಿದ್ದಾರೆ.

ಹೀಗಾಗಿ ದಿನಾಂಕ 02-11-2022ರಂದು ನಡೆದ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಚರ್ಚಿಸಲಾಗಿದೆ. ಚಾಲ್ತಿಯಲ್ಲಿರುವ ಪದ್ದತಿ, ಸಂಪ್ರದಾಯಗಳಿಗೆ ವಿರುದ್ಧವಾಗಿ ಧಾರ್ಮಿಕ ಆಚರಣೆ ನಡೆಸುವುದು, ಮುದ್ರಾಧಾರಣೆ ಮಾಡುತ್ತಿರುವುದು, ಜಯಂತಿಗಳನ್ನು ಆಚರಿಸುವುದು, ಭಾವಚಿತ್ರಗಳನ್ನು ಅಳವಡಿಸುತ್ತಿರುವುದನ್ನು ತೀರ್ವವಾಗಿ ಆಕ್ಷೇಪಿಸಲಾಗಿದೆ ಎಂದಿದ್ದಾರೆ.

ಆದ್ದರಿಂದ ಇನ್ಮುಂದೆ ದೇವಾಲಯಗಳಲ್ಲಿ ಚಾಲ್ತಿಯಲ್ಲಿರುವ ಧಾರ್ಮಿಕ ಪದ್ದತಿ, ಸಂಪ್ರದಾಯಗಳಿಗೆ ವಿರುದ್ಧವಾಗಿ ಧಾರ್ಮಿಕ ಪದ್ದತಿ, ಸಂಪ್ರದಾಯಗಳನ್ನು ಅನುಸರಿಸುವುದು, ಭಾವಚಿತ್ರ, ವಿಗ್ರಹಣಗಳನ್ನು ಅಳವಡಿಸುವುದು, ಮುದ್ರಾಧಾರಣೆ ಮಾಡುವುದು, ಜಯಂತಿಗಳನ್ನು ಆಚರಿಸುವುದನ್ನು ನಡೆಸದಂತೆ ಸೂಚನೆ ನೀಡಲಾಗಿದೆ.

ಆಯಾ ದೇವಾಲಯಗಳಲ್ಲಿ ಆಚರಣೆಯಲ್ಲಿರುವ ಆಗಮ, ಶಾಸ್ತ್ರ, ಪದ್ಧತಿ, ಸಂಪ್ರದಾಯಗಳಿಗೆ ವಿರುದ್ಧವಾಗಿ ಧಾರ್ಮಿಕ ಆಚರಣೆ, ಮುದ್ರಾಧಾರಣೆ, ಜಯಂತಿಗಳನ್ನು ಆಚರಿಸುವುದು, ಭಾವಚಿತ್ರಗಳನ್ನು ಅಳವಡಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಒಂದು ವೇಳೆ ಈ ನಿಯಮ ತಪ್ಪಿದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!