Friday, June 2, 2023

Latest Posts

ELECTION-2023 | ಇಲ್ಲಿದೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿಯ ಹೈಲೈಟ್ಸ್…

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ವಿಧಾನಸಭಾ ಚುನಾವಣೆ ಯಾವಾಗ ಎನ್ನುವ ಪ್ರಶ್ನೆಗೆ ತೆರೆ ಬಿದ್ದಿದ್ದು, ಮೇ 10ರಂದು ಚುನಾವಣೆ ನಡೆಯಲಿದೆ.

ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು, ಚುನಾವಣಾ ಹಾಗೂ ಮತಎಣಿಕೆಯ ದಿನಾಂಕವನ್ನು ಘೋಷಿಸಿದೆ. ಮೇ.10 ರಂದು ಚುನಾವಣೆ ಹಾಗೂ ಮೇ 13ರಂದು ಕೌಂಟಿಂಗ್ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಯಾವೆಲ್ಲಾ ವಿಚಾರಗಳು ಪ್ರಸ್ತಾಪವಾಯ್ತು ಮಾಹಿತಿ ಇಲ್ಲಿದೆ..

  • ರಾಜ್ಯದಲ್ಲಿ ಒಟ್ಟು 2,62,422,561 ಪುರುಷ ಮತದಾರರು, 2,59,26,319 ಮಹಿಳಾ ಮತದಾರರು ಹಾಗೂ 4,699ತೃತೀಯ ಲಿಂಗಿ ಮತದಾರರು ಇದ್ದಾರೆ. 12.15 ಲಕ್ಷ ಯುವ ಮತದಾರರು ಇದ್ದಾರೆ ಎಂದು ಮುಖ್ಯ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
  • ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 80 ವರ್ಷ ಮೇಲ್ಪಟ್ಟ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ನೀಡಲಾಗಿದೆ.
  • ಜೇನುಕುರುಬ, ಕಾಡುಕುರುಬ ಮತದಾರರಿಗೆ ಪ್ರತ್ಯೇಕ ಬೂತ್ ವ್ಯವಸ್ಥೆ ಮಾಡಲಾಗಿದೆ.
  • ಒಟ್ಟಾರೆ 58,282 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದ್ದು, ನಗರದಲ್ಲಿ 24,063 ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 34,219 ಮತಗಟ್ಟೆ ವ್ಯವಸ್ಥೆ ಮಾಡಲಾಗಿದೆ.
  • ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ವಿಮಾನ ನಿಲ್ದಾಣ, ಹೆದ್ದಾರಿಗಳು, ಬಂದರುಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.
  • ಹಣ, ಮದ್ಯ, ಮತದಾರರಿಗೆ ಗಿಫ್ಟ್ ಐಟಂ ಹಂಚುವುದನ್ನು ತಡೆಯಲಾಗುತ್ತದೆ.
  • ಈ ಬಾರಿ ರಾಜ್ಯದ 224 ಕ್ಷೇತ್ರದಲ್ಲೂ ಒಂದೇ ಹಂತದ ಮತದಾನ ನಡೆಯಲಿದೆ.
  • ಏಪ್ರಿಲ್ 13 ರಂದು ಅಧಿಸೂಚನೆ ಪ್ರಕಟಗೊಳ್ಳಲಿದ್ದು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕಡೇ ದಿನ.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!