ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೇಬು ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ತಿಳಿದೇ ಇದೆ. ಪ್ರತಿದಿನ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಅದೇ ರೀತಿ ಸೇಬಿನ ಹೂವಿನ ಚಹಾ ಕೂಡ ಆರೋಗ್ಯಕ್ಕೆ ತುಂಬಾ ಸಹಕಾರಿ. ಹಾಗಾದ್ರೆ ಅದನ್ನು ಮಾಡುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.
ಮಾಡುವುದು ವಿಧಾನ:
2 ಕಪ್ ನೀರಿಗೆ 1 ಚಮಚ ಸೇಬು ಹೂ ಚಹಾ ಎಲೆಗಳನ್ನು ಸೇರಿಸಿ 5 ನಿಮಿಷ ಕುದಿಸಿ, ಬಳಿಕ ಅದಕ್ಕೆ ಶುಂಠಿ, ದಾಲ್ಚಿನ್ನಿ ಸೇರಿಸಿ ಮತ್ತೆ 5 ನಿಮಿಷ ಕುದಿಸಿ. ಬಳಿಕ ಸೋಸಿ. ತಣ್ಣಗಾದ ಮೇಲೆ ಕುಡಿಯಿರಿ.
ಸೇಬು ಹೂವಿನ ಚಹಾ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಹಾಗಾಗಿ ಮಧುಮೇಹಿಗಳು ಇದನ್ನು ಸೇವಿಸಬಹುದು. ಸೇಬು ಹೂವಿನ ಚಹಾದಲ್ಲಿ ಮೆಗ್ನೀಶಿಯಮ್, ವಿಟಮಿನ್ ಸಿ ಮತ್ತು ಸೋಡಿಯಂ ಇದೆ. ಇದು ಮೂಳೆಗಳ ಆರೋಗ್ಯವನ್ನು ಕಾಪಾಡುತ್ತದೆ. ಇದು ಬ್ಯಾಕ್ಟೀರಿಯಾ, ವೈರಸ್ ವಿರುದ್ಧ ಹೋರಾಡುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಸುತ್ತದೆ.