ಆರ್ಥಿಕ ಹಿಂಜರಿತ ಸರಿಪಡಿಸುವ ಬಜೆಟ್ ಇದಾಗಿದೆ: ಮಾಜಿ ಸಿಎಂ ಬಿಎಸ್‌ವೈ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಬಜೆಟ್ ಸ್ವಾಗತಾರ್ಹ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಆರ್ಥಿಕ ಹಿಂಜರಿತ ಸರಿಪಡಿಸುವ ನಿಟ್ಟಿನಲ್ಲಿ ಬಜೆಟ್ ಪೂರಕವಾಗಿದೆ. ಇದು ದೀರ್ಘಾವಧಿ ಆರ್ಥಿಕ ಅಭಿವೃದ್ಧಿ ಗುರಿ ಹೊಂದಿದೆ ಎಂದಿದ್ದಾರೆ.
ಈ ಬಾರಿ ಗ್ರಾಮೀಣ ಹಾಗೂ ನಗರಾಭಿವೃದ್ಧಿ ಎರಡೂ ಕ್ಷೇತ್ರಗಳಿಗೆ ಒತ್ತು ನೀಡಲಾಗಿದೆ. ಡಿಜಿಟಲೀಕರಣ, ಸ್ವಾವಲಂಬನೆಗೂ ಉತ್ತಮ ಸ್ಥಾನ ನೀಡಲಾಗಿದೆ ಎಂದಿದ್ದಾರೆ. ವಿದ್ಯುತ್ ಚಾಲಿತ ವಾಹನಗಳಿಗೆ ಬ್ಯಾಟರಿ ಸ್ವಾಪಿಂಗ್ ಕೇಂದ್ರ ಸ್ಥಾಪನೆ ನಿರ್ಧಾರ ಸ್ವಾಗತಾರ್ಹ ಎಂದಿದ್ದಾರೆ. ನದಿಗಳ ಜೋಡಣೆ, ಹಳ್ಳಿಗಳಿಗೆ ಆಪ್ಟಿಕಲ್ ಫೈಬರ್, ಮನೆಗಳಿಗೆ ಕುಡಿಯುವ ನೀರಿನ ಸೌಲಭ್ಯ ನೀಡಲಾಗುತ್ತಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!