ಹೊಸದಿಗಂತ ಆನ್ ಲೈನ್ ಡೆಸ್ಕ್:
ಎಲೆಕ್ಟ್ರಿಕ್ ವಾಹನಗಳಿಗೆ 2022ರೊಳಗೆ ದೇಶದಲ್ಲಿ 10 ಸಾವಿರ ಚಾರ್ಜಿಂಗ್ ಕೇಂದ್ರಗಳನ್ನು ನಿರ್ಮಿಸಲು ಹೀರೋ ಎಲೆಕ್ಟ್ರಿಕ್ ಕಂಪನಿ ಮುಂದಾಗಿದೆ.
ದೇಶಾದ್ಯಂತ ಎಲೆಕ್ಟ್ರಿಕ್ ಚಾರ್ಜಿಂಗ್ ಮೂಲಸೌಕರ್ಯವನ್ನು ಹೆಚ್ಚಿಸಲು ಬೃಹತ್ ಪಾಲುದಾರಿಕೆಯನ್ನು ಘೋಷಿಸಲಾಗಿದ್ದು, ಮುಂದಿನ ವರ್ಷದೊಳಗೆ 10 ಸಾವಿರ ಚಾರ್ಜಿಂಗ್ ಕೇಂದ್ರ ಸ್ಥಾಪಿಸಲು ಸಂಸ್ಥೆ ಬದ್ಧವಾಗಿದೆ ಎಂದು ಹೀರೋ ಎಲೆಕ್ಟ್ರಿಕ್ ಕಂಪನಿ ತಿಳಿಸಿದೆ.
ಈ ಬಗ್ಗೆ ಸಮೀಕ್ಷೆ ನಡೆಸಿ ಜನರ ಅಭಿಪ್ರಾಯ ಸಂಗ್ರಹಿಸಿದ ಸಂಸ್ಥೆ, ಜನರಿಗೆ ಹೆಚ್ಚಿನ ಸ್ಮಾರ್ಟ್ ಸ್ಟೇಷನ್ ಅಗತ್ಯವಿದೆ ಎಂದಿದ್ದಾರೆ. ಈ ನಿಟ್ಟಿನಲ್ಲಿ ಪರಿಸರ ಸುಧಾರಿಸುವ ಸಲುವಾಗಿ ಈ ಬೃಹತ್ ಯೋಜನೆಯ ಗುರಿ ಕೈಗೆತ್ತಿಕೊಳ್ಳಲಾಗಿದೆ ಎಂದಿದೆ.
ದೇಶದಲ್ಲಿ ಎಲೆಕ್ಟ್ರಿಕ್ ಬೈಕ್ ಗಳ ಬಳಕೆ ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಚಾರ್ಜಿಂಗ್ ಸ್ಟೇಷನ್ ಗಳ ಸೌಕರ್ಯವನ್ನು ಗ್ರಾಹಕರು ಬಯಸುತ್ತಿದ್ದು, ಇದರಿಂದ ಎಲೆಕ್ಟ್ರಿಕ್ ಬೈಕ್ ಗಳ ಮಾರುಕಟ್ಟೆಗೆ ಇನ್ನಷ್ಟು ಬಲಗೊಳ್ಳಲಿದೆ ಎಂದು ಸಂಸ್ಥೆ ತಿಳಿಸಿದೆ.