ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಕೇಸ್ಗೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ ನಟ ದರ್ಶನ್ ಅರೆಸ್ಟ್ ಆಗಿದ್ದು, ಜೈಲುವಾಸ ಅನುಭವಿಸುತ್ತಿದ್ದಾರೆ.
ಇದೀಗ ಅವರನ್ನೇ ನಂಬಿಕೊಂಡು, ಅರ್ಧಂಬರ್ಧ ಆಗಿರುವ ಸಿನಿಮಾಗಳೆಲ್ಲ ನೆಲಕಚ್ಚಿವೆ. ರೇಣುಕಾಸ್ವಾಮಿ ಮರ್ಡರ್ ಪ್ರಕರಣ ಸದ್ಯದಲ್ಲೇ ಇತ್ಯರ್ಥವಾಗುವಂತೆ ಕಾಣುತ್ತಿಲ್ಲ. ಹೀಗಾಗಿ ಡೆವಿಲ್ ಟೀಂ ಪ್ಯಾಕಪ್ ಮಾಡಿದೆ.
ಮೈಸೂರಿನ ಲಲಿತ ಮಹಲ್ ಹೋಟೆಲ್ ನಲ್ಲಿ ದರ್ಶನ್ ಬಹುನಿರೀಕ್ಷಿತ ಡೆವಿಲ್ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಅರೆಸ್ಟ್ ಆಗಿದ್ದು, ನಟನನ್ನು ನಂಬಿದ್ದ ಚಿತ್ರತಂಡಕ್ಕೆ ದೊಡ್ಡಮಟ್ಟದ ನಷ್ಟವಾಗಿದೆ.