ʻಕ್ಷಮಿಸಿ, ಅಭಿಮಾನಿಗಳನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೆಜಿಎಫ್ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ವೈಡ್ ಅಭಿಮಾನಿಗಳನ್ನು ಸಂಪಾದಿಸಿರುವ ನಟ ರಾಕಿಂಗ್‌ ಸ್ಟಾರ್‌ ಬರ್ತಡೇಗೆ ಹತ್ತಿರವಾಗುತ್ತಿದೆ. ರಾಕಿ ಭಾಯ್ ತಮ್ಮ ಅಭಿಮಾನಿಗಳೊಂದಿಗೆ ಪ್ರತಿ ವರ್ಷ ಜನವರಿ 8 ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಾರೆ.

ಆದರೆ ಈ ವರ್ಷ ಯಶ್ ಅಭಿಮಾನಿಗಳನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. “ವರ್ಷವಿಡೀ ಮತ್ತು ವಿಶೇಷವಾಗಿ ನನ್ನ ಜನ್ಮದಿನದಂದು ನೀವು ತೋರಿಸುವ ಪ್ರೀತಿ ಮತ್ತು ವಾತ್ಸಲ್ಯವು ನನ್ನ ಹೃದಯ ಮುಟ್ಟುತ್ತದೆ. ವರ್ಷವಿಡೀ ನೀವು ತೋರಿದ ಪ್ರೀತಿಯನ್ನು ಮರಳಿ ನೀಡಲು ನನ್ನ ಜನ್ಮದಿನದಂದು ನಾನು ನಿಮ್ಮನ್ನು ಭೇಟಿಯಾಗುತ್ತೇನೆ.

ಆದರೆ ಈ ವರ್ಷ ನನ್ನ ಹುಟ್ಟುಹಬ್ಬದಂದು ನಾನು ಬೆಂಗಳೂರಿನಲ್ಲಿ ಇರುವುದಿಲ್ಲ. ಈ ಬಾರಿ ನಿಮ್ಮನ್ನೆಲ್ಲ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ಆದರೆ ನಾನು ಶೀಘ್ರದಲ್ಲೇ ನಿಮ್ಮನ್ನು ಭೇಟಿಯಾಗುತ್ತೇನೆ ಎಂದು ಭರವಸೆ ನೀಡಿದರು. ನಾನು ಬರುವವರೆಗೆ ನಿಮ್ಮ ತಾಳ್ಮೆ ಮತ್ತು ಪ್ರೀತಿಯೇ ನನಗೆ ಆಶೀರ್ವಾದ ಎಂದು ಪತ್ರದಲ್ಲಿ ಬರೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!