ದರ್ಶನ್ ನಟನೆಯ ‘ಡೆವಿಲ್’ ಸಿನಿಮಾಗೆ ಹೀರೋಯಿನ್ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾಗೆ ಕೊನೆಗೂ ನಾಯಕಿ ಫಿಕ್ಸ್ ಆಗಿದ್ದು, ವಾಮನ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ತುಳುನಾಡ ರಚನಾ ರೈ (Rachana Rai) ಅವರು ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಇವರು ಶಂಕರ್ ರಾಮನ್ ನಿರ್ದೇಶನದಲ್ಲಿ ಮೂಡಿ ಬಂದ ವಾಮನ ಸಿನಿಮಾಗೆ ನಾಯಕಿಯಾಗಿದ್ದರು. ಈ ಹಿಂದೆ ತುಳು ಸಿನಿಮಾವೊಂದರಲ್ಲಿ ನಟಿಸಿದ್ದ ರಚನಾಗೆ ವಾಮನ ಮೊದಲ ಕನ್ನಡ ಸಿನಿಮಾವಾಗಿತ್ತು.

ಈ ತುಳುನಾಡ ಚೆಲುವೆ, ಮಾಡೆಲ್, ಡ್ಯಾನ್ಸರ್ ಹಾಗೇ ಬರಹಗಾರ್ತಿ ಕೂಡ. ಓ‌ ಮೈ ಡಾಗ್ ಎಂಬ ಪುಸ್ತಕ ಬರೆದಿರುವ ರಚನಾ ಸಕಲಕಲಾವಲ್ಲಭೆ. ಈಗ ಸ್ಟಾರ್ ನಟನ ಚಿತ್ರಕ್ಕೆ ನಾಯಕಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಮೊನ್ನೆಯಷ್ಟೇ ‘ಡೆವಿಲ್’ (Devil Film) ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆದ ಬೆನ್ನಲ್ಲೇ ಅದರ ತೆರೆಹಿಂದಿನ ಝಲಕ್ ಹೇಗಿತ್ತು ಎಂಬುದನ್ನು ಇದೀಗ ರಿವೀಲ್ ಮಾಡಿದ್ದಾರೆ. ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಮೇಕಿಂಗ್ ವಿಡಿಯೋವನ್ನು ಚಿತ್ರತಂಡ ರಿಲೀಸ್ ಮಾಡಿತ್ತು.

‘ತಾರಕ್’ ನಂತರ ‘ಡೆವಿಲ್’ ಚಿತ್ರದ ಮೂಲಕ ಮತ್ತೆ ದರ್ಶನ್‌ಗೆ ಪ್ರಕಾಶ್ ವೀರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಶುರುವಾಗಿದೆ. ಆದರೆ ಶೂಟಿಂಗ್ ವೇಳೆ, ದರ್ಶನ್ ಕೈಗೆ ಪೆಟ್ಟಾದ ಹಿನ್ನೆಲೆಯಲ್ಲಿ ಚಿತ್ರೀಕರಣ ಸ್ಥಗಿತವಾಗಿತ್ತು. ಈಗ ಗುಣಮುಖರಾಗಿರುವ ದರ್ಶನ್ ಸದ್ಯದಲ್ಲೇ ಡೆವಿಲ್ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!