ಹೆಸ್ಕಾಂ ನಲ್ಲಿ 200 ಶಿಶುಕ್ಷು ತರಬೇತಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತವು ಬಿ.ಇ ಪದವಿ ಹಾಗೂ ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳಿಂದ 2022-23ನೇ ಸಾಲಿಗೆ 200 ಶಿಶುಕ್ಷು ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜನವರಿ 25,2023ರೊಳಗೆ ಅರ್ಜಿಯನ್ನು ಹಾಕಬಹುದು.

ಬಿ.ಇ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು.

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ನೇಮಕಾತಿಯ ಶಿಶುಕ್ಷು ತರಬೇತಿಗಾಗಿ ಆಯ್ಕೆಯಾದ ಪದವಿ ಅಭ್ಯರ್ಥಿಗಳಿಗೆ ತಿಂಗಳಿಗೆ 9,000/-ರೂ ಮತ್ತು ಡಿಪ್ಲೋಮಾ ಅಭ್ಯರ್ಥಿಗಳಿಗೆ 8,000/-ರೂ ಸ್ಟೈಫೆಂಡ್ ಅನ್ನು ನೀಡಲಾಗುವುದು.

ಶಿಶುಕ್ಷು ತರಬೇತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಿ ತದನಂತರ ಪ್ರವೇಶ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://hescom.karnataka.gov.in/english ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 25,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!