ರಾಮನಗರ ಹೆಸರು ಬದಲಾವಣೆ ಹಿಂದೆ ಅಡಗಿದೆ ಹಿಡೆನ್ ಅಜೆಂಡಾ: ನಿಖಿಲ್ ಕುಮಾರಸ್ವಾಮಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಿಸುವುದಕ್ಕೆ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಕೇವಲ ಕೆಲವರನ್ನು ತುಷ್ಟೀಕರಣ ಮಾಡಲಿಕ್ಕೆ ಮಾತ್ರ ರಾಮನಗರ ಹೆಸರನ್ನು ಬದಲಾವಣೆ ಮಾಡಲಾಗುತ್ತಿದೆ. ಪುರಾಣ ಪ್ರಸಿದ್ಧವಾದ ರಾಮನಗರ ಹೆಸರನ್ನು ಕಿತ್ತುಹಾಕಿ ಅದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದರಲ್ಲಿ ಯಾವ ಹಿಡೆನ್ ಅಜೆಂಡಾ ಅಡಗಿದೆಯೋ ಗೊತ್ತಿಲ್ಲ. ಆದರೆ ಯಾರನ್ನು ಓಲೈಸಲು ರಾಮನಗರ ಹೆಸರಿಗೆ ಗೇಟ್ ಪಾಸ್ ನೀಡಲಾಗುತ್ತಿದೆ ಎನ್ನುವ ಒಳಗುಟ್ಟು ಮಾತ್ರ ರಟ್ಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಿಯಲ್ ಎಸ್ಟೇಟ್ ದಂಧೆಕೋರರಿಗೆ ಜಿಲ್ಲೆಯನ್ನು ಸ್ವರ್ಗವನ್ನಾಗಿ ಮಾಡುವುದು ಈ ಷಡ್ಯಂತ್ರದ ಕರಾಳಮುಖ. ಕೆಲವರ ತುಷ್ಟೀಕರಣದ ಮತ್ತೊಂದು ಮುಖ. ರಾಜಕೀಯವಾಗಿ ಬಹಳ ಎತ್ತರದ ಸ್ಥಾನದಲ್ಲಿರುವ ರಾಮನಗರ ಜಿಲ್ಲೆಯ ಹೆಗ್ಗುರುತನ್ನೇ ಸರ್ವನಾಶ ಮಾಡುವ ಹುನ್ನಾರ ನಡೆದಿದೆ ಎಂದು ಕಟುವಾಗಿ ಟೀಕಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!