ರಾಜ್ಯದೆಲ್ಲೆಡೆ ಹೈ ಅಲರ್ಟ್: ಬೆಂಗಳೂರಲ್ಲಿ ಬಂಧಿತ ಐವರು ಶಂಕಿತ ಉಗ್ರರು 7 ದಿನ ಸಿಸಿಬಿ ಕಸ್ಟಡಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಇಂದು ಐವರು ಶಂಕಿತ ಭಯೋತ್ಪಾದಕರ (Suspected terrorists) ಬಂಧನವಾಗಿದ್ದು, ಈ ಬೆಲ್ಲ ಎಲೆದ್ದೆ ಕಟ್ಟೆಚ್ಚರ ವಹಿಸಲಾಗಿದೆ. ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದು, 7 ದಿನ ವಶಕ್ಕೆ ನೀಡಲಾಗಿದೆ.

ತನಿಖಾಧಿಕಾರಿ ಎಸಿಪಿ ಕುಮಾರ್​ ನೇತೃತ್ವದಲ್ಲಿ ಬೆಂಗಳೂರಿನ ಎನ್​ಐಎ ವಿಶೇಷ ಕೋರ್ಟ್​ಗೆ ಸಿಸಿಬಿ ಪೊಲೀಸರು ಹಾಜರು ಪಡಿಸಿದ್ದಾರೆ.

ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಸಿಸಿಬಿ ಪೊಲೀಸರಿಂದ ಐವರು ಶಂಕಿತ ಉಗ್ರರನ್ನು ಬಂಧಿಸಲಾಗಿತ್ತು. ಬಂಧಿತ ಆರೋಪಿಗಳನ್ನು ಬೆಂಗಳೂರಿನ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಹಾಜರುಪಡಿಸಿದರು. ಈ ವೇಳೆ 15 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರು.ಈ ಪ್ರಕರಣ ವಿಚಾರಣೆಯನ್ನು ನಡೆಸಿದ ಎನ್‌ಐಎ ವಿಶೇಷ ನ್ಯಾಯಾಲಯವು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!