ರಾಜ್ಯ ಚುನಾವಣೆಗೆ ಹೈ ಅಲರ್ಟ್: ನಾಳೆ ಸಂಜೆ 5 ರಿಂದ ರಾಜ್ಯಾಧ್ಯಂತ ಮೂರು ದಿನ ಮದ್ಯದಂಗಡಿ ಬಂದ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಚುನಾವಣೆ ಹಿನ್ನೆಲೆ ನಾಳೆ ಸಂಜೆ 5ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ನಾಳೆ ಸಂಜೆ 5 ಗಂಟೆಯಿಂದ ಮೇ.10ರ ಮಧ್ಯರಾತ್ರಿವರೆಗೆ ಹಾಗೂ ಮೇ.13ರ ಮತಏಣಿಕೆಯಂದು ಮಧ್ಯರಾತ್ರಿಯವರೆಗೆ ಸೇರಿದಂತೆ ಮೂರು ದಿನ ಮದ್ಯದಂಗಡಿಗಳು ಬಂದ್ ಆಗಲಿವೆ .

ಈ ಸಂಬಂದ ಆಯಾ ಜಿಲ್ಲಾಡಳಿತದಿಂದ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ಮತದಾನದ ಪ್ರಯುಕ್ತ ಮೇ. 08 ರ ಸಂಜೆ 5 ಗಂಟೆಯಿಂದ,ಮೇ. 10 ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಏಣಿಕೆ ಪ್ರಯುಕ್ತ ದಿನಾಂಕ ಮೇ .13 ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12ಗಂಟೆಯವೆರೆಗ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ತಿಳಿಸಲಾಗಿದೆ.

ಮತದಾನ ಮತ್ತು ಮತಏಣಿಕೆಯ ಸಂದರ್ಭದಲ್ಲಿ ಮದ್ಯದ ತಯಾರಿಕೆ, ದಾಸ್ತಾನು, ಸಾಗಾಣಿಕೆ ಮತ್ತು ಮಾರಾಟ ಮಾಡುವುದನ್ನು ಸಂಪೂರ್ಣ ನಿಷೇಧಿಸಿ, ಶುಷ್ಕ ದಿನ ( Dry Day) ಎಂದು ಘೋಷಿಸಿ ಆದೇಶಿಸಿದೆ. ಈ ದಿನಗಳಂದು ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ತರಹದ ಮಧ್ಯದ ತಯಾರಿಕೆ, ದಾಸ್ತಾನು, ಸಾಗಾಣಿಕೆ ಮತ್ತು ಮದ್ಯ ಮಾರಾಟವನ್ನು ( Sale of liquor ) ನಿಷೇಧಿಸಿ ಆದೇಶಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!