Friday, September 29, 2023

Latest Posts

G20 ಸಭೆಗೆ ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್: ಆನ್‌ಲೈನ್ ಫುಡ್, ಹೋಂ ಡೆಲಿವರಿ ಬಂದ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ (Delhi) ಸೆಪ್ಟೆಂಬರ್ 8-10 ರಂದು ಜಿ20 ಶೃಂಗಸಭೆ ನಡೆಯುವ ಹಿನ್ನೆಲೆ ವಾಣಿಜ್ಯ ಸೇವೆಗಳು ಬಂದ್ ಅಗಲಿದ್ದು, ಇದರಿಂದ ಕ್ಲೌಡ್ ಕಿಚನ್‌ಗಳು, ಹೋಟೆಲ್‌ಗಳು ಬಂದ್ ಇರಲಿದ್ದು ಆನ್‌ಲೈನ್ ಫುಡ್ ಡೆಲಿವರಿ (Food Delivery) ಇರುವುದಿಲ್ಲ. ಇದರ ಜೊತೆಗೆ ಅಮೆಜಾನ್, ಫ್ಲಿಪ್‌ಕಾರ್ಟ್‌ನಂತಹ ಹೋಂ ಡೆಲಿವರಿ (Home Delivery) ಸರ್ವಿಸ್‌ಗಳನ್ನೂ ಅನುಮತಿಸಲಾಗುವುದಿಲ್ಲ ಎಂದು ವಿಶೇಷ ಪೊಲೀಸ್ ಆಯುಕ್ತ ಎಸ್‌ಎಸ್ ಯಾದವ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಗರದಲ್ಲಿ 3 ದಿನ ಲಾಕ್‌ಡೌನ್ ಇರುವುದಿಲ್ಲ. ಆದ್ರೆ ಜಿ20 ಶೃಂಗಸಭೆಯ ಸಮಯದಲ್ಲಿ ಸೆಪ್ಟೆಂಬರ್ 7ರ ಮಧ್ಯರಾತ್ರಿಯಿಂದ ಸೆಪ್ಟೆಂಬರ್ 10 ರ ಮಧ್ಯರಾತ್ರಿಯವರೆಗೆ ದೆಹಲಿಗೆ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗುವುದು ಎಂದು ತಿಳಿಸಿದರು.

ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 10 ರವರೆಗೆ ಸಾರ್ವಜನಿಕ ರಜೆಯನ್ನು ಘೋಷಿಸಿದೆ. ನಗರದಲ್ಲಿನ ಅಂಗಡಿಗಳು, ವ್ಯಾಪಾರಗಳು ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಸೆಪ್ಟೆಂಬರ್ 8, 9 ಮತ್ತು 10 ರಂದು ತಮ್ಮ ಉದ್ಯೋಗಿಗಳು ಮತ್ತು ಕಾರ್ಮಿಕರಿಗೆ ವೇತನ ಸಹಿತ ರಜೆಯನ್ನು ನೀಡುವಂತೆ ಸರ್ಕಾರ ನಿರ್ದೇಶಿಸಿದೆ.

ಶೃಂಗಸಭೆಯ ಸಮಯದಲ್ಲಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆಯಾಗಿರುತ್ತದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!