ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಾಣ ಮಾಡ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರಿನಲ್ಲಿ ಫಿಲ್ಮ್ ಸಿಟಿ ಮಾಡ್ತೀವಿ. ಕುಮಾರಸ್ವಾಮಿ ಅವರು ರಾಮನಗರಕ್ಕೆ ತೆಗೆದುಕೊಂಡು ಹೋಗಬೇಕು ಅಂತ ಅದನ್ನ ಕೈಬಿಟ್ರು. ಫಿಲ್ಮ್ ಸಿಟಿ ಮಾಡೋಕೆ ಜಾಗವನ್ನ ವಾರ್ತಾ ಇಲಾಖೆಗೆ ವರ್ಗಾವಣೆ ಮಾಡಿದ್ದೇವೆ. ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಸರ್ಕಾರ ನಿಮ್ಮ ಜೊತೆ ಇರಲಿದೆ ಎಂದು ಭರವಸೆ ನೀಡಿದ್ದಾರೆ.