ಯೋಗಿ ಹಾದಿಯಲ್ಲಿ ಹೊರಟ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್ ಕ್ಲಾಸ್: ಯೂ-ಟರ್ನ್ ಹೊಡೆದ ಹಿಮಾಚಲ ಪ್ರದೇಶ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದಂತೆ ಹಿಮಾಚಲ ಪ್ರದೇಶದಲ್ಲೂ ಆಹಾರ ಮಳಿಗೆಗಳ ಮೇಲೆ ಮಾಲೀಕರ ಹೆಸರು ಮತ್ತು ವಿಳಾಸವನ್ನು ಬರೆಯುವ ಆದೇಶ ನೀಡಿದ್ದ ಸಚಿವ ವಿಕ್ರಮಾದಿತ್ಯ ಸಿಂಗ್ ಅವರನ್ನು ದೆಹಲಿಗೆ ಕರೆಸಿದ್ದ ಕಾಂಗ್ರೆಸ್ ಹೈಕಮಾಂಡ್ ಛೀಮಾರಿ ಹಾಕಿದ್ದು, ಇದರ ಬೆನ್ನಲ್ಲೇ ಹಿಮಾಚಲ ಪ್ರದೇಶ ಇಂತಹ ಆದೇಶ ಹೊರಡಿಸಿಲ್ಲ ಎಂದು ಯೂ-ಟರ್ನ್ ಹೊಡೆದಿರುವ ಘಟನೆ ನಡೆದಿದೆ.

ಈ ಹಿಂದೆ ಕನ್ವರ್ ಯಾತ್ರೆಯ ಸಂದರ್ಭದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ಇದೇ ರೀತಿಯ ಆದೇಶವನ್ನು ಹೊರಡಿಸಿತ್ತು. ಅಂದು ಈ ನಿರ್ಧಾರವನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿತ್ತು. ಇದಾದ ಬಳಿಕ ಬುಧವಾರ ವಿಕ್ರಮಾದಿತ್ಯ ಸಿಂಗ್ ಇಲಾಖೆಯೇ ಈ ಆದೇಶ ಹೊರಡಿಸಿತ್ತು.

ಮೂಲಗಳ ಪ್ರಕಾರ, ಈ ವಿಷಯದ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡದಂತೆ PWD ಮತ್ತು ನಗರಾಭಿವೃದ್ಧಿ ಸಚಿವ ವಿಕ್ರಮಾದಿತ್ಯ ಸಿಂಗ್ ಅವರನ್ನು ಎಚ್ಚರಿಸಲಾಗಿತ್ತು. ವಿಕ್ರಮಾದಿತ್ಯನ ಈ ನಡೆಗೆ ಪಕ್ಷದ ವರಿಷ್ಠ ಮಲ್ಲಿಕಾರ್ಜುನ ಖರ್ಗೆ ತೀವ್ರ ಕೋಪಗೊಂಡಿದ್ದಾರೆ ಎನ್ನಲಾಗುತ್ತಿದೆ.

ಹಿಮಾಚಲ ನಗರಾಭಿವೃದ್ಧಿ ಸಚಿವಾಲಯದ ಈ ಆದೇಶವನ್ನು ಕಾಂಗ್ರೆಸ್ ನಾಯಕ ಟಿಎಸ್ ಸಿಂಗ್ ದೇವ್ ಕೂಡ ಟೀಕಿಸಿದ್ದಾರೆ. ಇದು ಖಂಡನೀಯ ಮತ್ತು ತಾರತಮ್ಯದ ಹೆಜ್ಜೆ ಎಂದು ಆರೋಪಿಸಿದ್ದರು.

‘ಈ ರೀತಿ ಏಕೆ ಮಾಡಲಾಗಿದೆ ಎಂದು ನನಗೆ ಅರ್ಥವಾಗುತ್ತಿಲ್ಲ. ಏಕೆಂದರೆ ಉತ್ತರ ಪ್ರದೇಶ ಸರ್ಕಾರವು ಕನ್ವರ್ ಯಾತ್ರೆಯ ಸಂದರ್ಭದಲ್ಲಿ ಇದೇ ರೀತಿಯ ನಿರ್ಧಾರವನ್ನು ತೆಗೆದುಕೊಂಡಿತ್ತು. ಒಬ್ಬ ವ್ಯಕ್ತಿಯ ಅಂಗಡಿಯಲ್ಲಿ ಹೆಸರನ್ನು ಬರೆಯುವ ಅವಶ್ಯಕತೆ ಏನು? ಇದರ ಹಿಂದಿನ ತರ್ಕ ನನಗೆ ಅರ್ಥವಾಗುತ್ತಿಲ್ಲ. ನೀವು ಒಬ್ಬ ವ್ಯಕ್ತಿಯನ್ನು ಮಾರಾಟ ಮಾಡುತ್ತಿಲ್ಲ. ನೀವು ಬ್ರಾಂಡ್ ಅನ್ನು ಮಾರಾಟ ಮಾಡುತ್ತಿದ್ದೀರಿ. ಆದ್ದರಿಂದ, ಯಾವುದೇ ವ್ಯಕ್ತಿಯ ಹೆಸರನ್ನು ಬಹಿರಂಗಪಡಿಸುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಎಐಡಿಯುಎಫ್ ಶಾಸಕ ರಫೀಕುಲ್ ಇಸ್ಲಾಂ ಕೂಡ ಅಂಗಡಿಗಳ ಮೇಲೆ ಹೆಸರು ಮತ್ತು ವಿಳಾಸಗಳನ್ನು ಬರೆಯುವ ಆದೇಶವನ್ನು ಟೀಕಿಸಿದರು. ಕಾಂಗ್ರೆಸ್ ಕೂಡ ಈಗ ಬಿಜೆಪಿ ಹಾದಿಯಲ್ಲಿ ಸಾಗಿದೆ ಎಂದರು. ಕಾಂಗ್ರೆಸ್ ಯುಪಿ ಮಾದರಿಯನ್ನು ಅಳವಡಿಸಿಕೊಂಡಿದೆ ಎಂದು ಎಐಡಿಯುಎಫ್ ನಾಯಕ ಆರೋಪಿಸಿದರು. ಇದರಲ್ಲಿ ಅಂಗಡಿ ಮಾಲೀಕರು ಮತ್ತು ವ್ಯವಸ್ಥಾಪಕರ ಹೆಸರನ್ನು ಬರೆಯಲು ಸಿಎಂ ಯೋಗಿ ಆದೇಶಿಸಿದ್ದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!