ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮ್ಮದು ರಾಷ್ಟ್ರೀಯ ಪಕ್ಷ. ಯತ್ನಾಳ ವಿಚಾರದಲ್ಲಿ ಪಕ್ಷದಲ್ಲಿನ ಬೆಳವಣಿಗೆ ಗಮನಿಸಿಯೇ ಪಕ್ಷದ ರಾಷ್ಟ್ರೀಯ ನಾಯಕರು ತೀರ್ಮಾನ ಕೈಗೊಂಡಿದ್ದಾರೆ ಎಂದರು.
ಹನಿಟ್ರ್ಯಾಪ್ ಕುರಿತು ಮಾತನಾಡಿ, ಸಚಿವ ಕೆ.ಎನ್.ರಾಜಣ್ಣ ಹನಿಟ್ರ್ಯಾಪ್ ವಿಚಾರವನ್ನು ಸದನದಲ್ಲೇ ಪ್ರಸ್ತಾಪಿಸಿದ್ದಾರೆ. ಅಲ್ಲದೇ, ಇನ್ನೂ 48 ಶಾಸಕರು ಹನಿ ಟ್ರ್ಯಾಪ್‌ಗೆ ಒಳಗಾಗಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ. ಹಾಗಾಗಿ, ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.