ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾಕಷ್ಟು ಕಸರತ್ತು ನಡೆಸುತ್ತಿರುವ ಪಕ್ಷಗಳು ಪ್ರಚಾರದಲ್ಲಿ ನಿರತರಾಗಿದ್ದಾರೆ. ಈ ಬೆಳವಣಿಗೆಗಳ ನಡುವೆ ಕಲ್ಯಾಣ ರಾಜ್ಯ ಪ್ರಗತಿ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಕೂಡ ಬಿಜೆಪಿ ಸೇರಲು ನಿರ್ಧರಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಶಾಸಕ ಜನಾರ್ದನ ರೆಡ್ಡಿ ಬಿಜೆಪಿ ಸೇರಲು ಗ್ರೀನ್ ಸಿಗ್ನಲ್ ಸಿಕ್ಕೆದೆ ಎನ್ನಲಾಗುತ್ತಿದೆ. ನಾಳೆ ರೆಡ್ಡಿ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅತ್ತ ಜನಾರ್ದನ ರೆಡ್ಡಿ ಕೂಡ ಬಿಜೆಪಿ ಸೇರಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಜನಾರ್ದನ ರೆಡ್ಡಿ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದರು. ಅಮಿತ್ ಶಾ ಭೇಟಿ ಬಳಿಕ ಇದೀಗ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಚರ್ಚೆ ನಡೆದಿದೆ. ಇದಾದ ನಂತರ ಬಿಜೆಪಿ ನಾಯಕತ್ವ ಮತ್ತು ಶ್ರೀರಾಮುಲು ನಡುವೆ ಗೌಪ್ಯ ಸಭೆ ನಡೆದಿದೆ ಎಂಬ ವದಂತಿ ಹಬ್ಬಿದ್ದು, ನೇಮಕಾತಿಗೆ ಒಪ್ಪಿಗೆ ಪಡೆಯಲಾಗಿದೆ ಎಂದು ವರದಿಯಾಗಿದೆ.
ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಜನಾರ್ದನ ರೆಡ್ಡಿ ಕೆಆರ್ ಪಿಪಿ ಸಭೆ ಕರೆದಿದ್ದಾರೆ. ಇಂದು ಮಧ್ಯಾಹ್ನ 1:30ಕ್ಕೆ ಕಾರ್ಯಕರ್ತರೊಂದಿಗೆ ಸಭೆ ನಡೆಯಲಿದ್ದು, ಅವರ ಬೆಂಬಲ ಪಡೆದು ಬಿಜೆಪಿ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.