Saturday, December 27, 2025

ಸಿಎಂ ಬದಲಾವಣೆ ಬಗ್ಗೆ ಮಾತನಾಡದಂತೆ ಹೈಕಮಾಂಡ್ ಸೂಚನೆ: ಕೋನರೆಡ್ಡಿ

ಹೊಸದಿಗಂತ ವರದಿ ಹುಬ್ಬಳ್ಳಿ:

ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ಏನು‌ ಪ್ರತಿಕ್ರಿಯೆ ನೀಡದಂತೆ ಹೈಕಮಾಂಡ್ ಸೂಚಿಸಿದೆ ಎಂದು ಶಾಸಕ ಎನ್.ಎಚ್. ಕೋನರೆಡ್ಡಿ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಉಪಹಾರ, ಊಟವನ್ನು ಮಾಡಿದ್ದಾರೆ ಎಂದರು.

ನಮ್ಮ ಪಕ್ಷದಲ್ಲಿ ಹೊಂದಾಣಿಕೆ ಇದೆ. ಯಾವುದೇ ಗುಂಪುಗಾರಿಕೆ ಇಲ್ಲ. ಅಧಿಕಾರ ಸಿಗುತ್ತದೆ ಎಂದರೆ ಯಾರು ಬೇಡ ಅನ್ನಲ್ಲಾ. ಎಲ್ಲರಿಗೂ ಅಧಿಕಾರ ಬೇಕು. ನನಗೆ ಸಚಿವ ಸ್ಥಾನ ನೀಡಿದರೆ ಉತ್ತಮವಾಗಿ ನಿಭಾಯಿಸಿ ತೋರಿಸುತ್ತೇವೆ. ಎಲ್ಲರಿಗೂ ಸಚಿವರಾಗುವ ಇಚ್ಛೆ ಇರುತ್ತದೆ. ಆದರೆ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದು ಸ್ಪಷ್ಟಪಡಿಸಿದರು.

error: Content is protected !!