Friday, July 1, 2022

Latest Posts

ಹೈಕಮಾಂಡ್ ಆದೇಶ: ಪಾದಯಾತ್ರೆ ಕೈಬಿಟ್ಟ ಕಾಂಗ್ರೆಸ್ ನಾಯಕರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೇಕೆದಾಟು ಪಾದಯಾತ್ರೆಯನ್ನು ಕಡೆಗೂ ಮುಂದೂಡಲು ಕೈ ನಾಯಕರು ನಿರ್ಧರಿಸಿದ್ದಾರೆ. ಹೈಕಮಾಂಡ್ ಆದೇಶಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ತಲೆಬಾಗಿದ್ದು, ಪಾದಯಾತ್ರೆಯನ್ನು ಮೊಟಕುಗೊಳಿಸಿದ್ದಾರೆ.

ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ಕೈ ನಾಯಕರು ಸಭೆ ನಡೆಸಿದ್ದು, ತಾತ್ಕಾಲಿಕವಾಗಿ ಯಾತ್ರೆ ರದ್ದುಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ಪಾದಯಾತ್ರೆ ನಿಲ್ಲಿಸುವ ಆಲೋಚನೆ ಇರಲಿಲ್ಲ. ಆದರೆ ಹೈಕಮಾಂಡ್‌ಗೆ ಗೌರವ ನೀಡುತ್ತೇವೆ. ಸದ್ಯಕ್ಕೆ ಯಾತ್ರೆ ಮೊಟಕುಗೊಳಿಸಿ ಮತ್ತೆ ಮುಂದಿನ ದಿನಗಳಲ್ಲಿ ಇದನ್ನು ಮುಂದುವರಿಸುತ್ತೇವೆ ಎಂದು ಕೈ ನಾಯಕರು ಹೇಳಿದ್ದಾರೆ.

ಇಂದು ನಡೆಯುತ್ತಿದ್ದ ಪಾದಯಾತ್ರೆಯನ್ನು ನಿಲ್ಲಿಸಿ ಎಂದು ಹೈಕಮಾಂಡ್ ಸೂಚಿಸಿತ್ತು. ರಣದೀಪ್ ಸುರ್ಜೇವಾಲ ಮೂಲಕ ಸಂದೇಶ ರವಾನಿಸಲಾಗಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಡಿಕೆಶಿಗೆ ಕರೆ ಮಾಡಿ ವಿವರಣೆ ಕೇಳಿದ್ದರು. ಈ ಮಧ್ಯೆ ಸಿಎಂ ಬೊಮ್ಮಾಯಿ ಕೂಡ ಡಿಕೆಶಿಗೆ ಪತ್ರ ಬರೆದು ಪಾದಯಾತ್ರೆ ಸ್ಥಗಿತಗೊಳಿಸುವಂತೆ ಮನವಿ ಮಾಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss