ಸಿದ್ದರಾಮಯ್ಯ-ಡಿಕೆಶಿಗೆ ಹೈಕಮಾಂಡ್ ಶಾಕ್: ಪ್ರತ್ಯೇಕ ರ್ಯಾಲಿಗೆ ಬಿತ್ತು ಬ್ರೇಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೇರಲು ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಇದಕ್ಕಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತ್ಯೇಕ ರ್ಯಾಲಿಗೆ ಮುಂದಾಗಿದ್ದರು. ಆದ್ರೆ ಇದೀಗ ಇವರ ಪ್ರತ್ಯೇಕ ಬಸ್ ರ್ಯಾಲಿಗೆ ಹೈಕಮಾಂಡ್ ಬ್ರೇಕ್ ಹಾಕಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ, ಅಭ್ಯರ್ಥಿ ಆಯ್ಕೆ ವಿವಿಧ ಚರ್ಚೆ ನಡೆಸಲು ಇಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಭೆ ನಡೆಸಿದೆ.
ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಪ್ರತ್ಯೇಕ ರ್ಯಾಲಿಗೆ ಹೈಕಮಾಂಡ್ ಬ್ರೇಕ್ ಹಾಕಿದೆ. ಪ್ರತ್ಯೇಕ ರ್ಯಾಲಿ ಹೊರಟರೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಹೈಕಮಾಂಡ್ ನಿರ್ಧರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!