ಹೈಕಮಾಂಡ್ ತುರ್ತು ಬುಲಾವ್.. ಶಿರಡಿಯಿಂದ ದೆಹಲಿಗೆ ಪ್ರಯಾಣ ಬೆಳೆಸಿದ ಡಿಸಿಎಂ ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಡಿ.ಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ ತುರ್ತು ಬುಲಾವ್ ನೀಡಿದ ಹಿನ್ನೆಲೆಯಲ್ಲಿ ಶಿರಡಿಯಿಂದ ದೆಹಲಿಗೆ ಅವರು ಪ್ರಯಾಣ ಬೆಳೆಸಿದ್ದಾರೆ.

ಇಂದು ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ ದೆಹಲಿಗೆ ತೆರಳಿದ್ದ ಡಿಕೆಶಿಯವರಿಗೆ ರಾಹುಲ್ ಗಾಂಧಿ ಭೇಟಿಗೆ ಸಮಯ ನೀಡಿರಲಿಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿರುವ ನಡುವೆಯೇ ಡಿಕೆ ಶಿವಕುಮಾರ್‌ ಅವರು ಜುಲೈ 8 ಮಂಗಳವಾರ ದೆಹಲಿಗೆ ತೆರಳಿದ್ದರು. ಮಂಗಳವಾರ ಮತ್ತು ಬುಧವಾರ ಕೇಂದ್ರ ಸರ್ಕಾರದ ಸಚಿವರನ್ನು ಭೇಟಿಯಾಗಿ ಇಲಾಖೆ ಸಂಬಂಧ ಮಾತುಕತೆ ನಡೆಸಿದ್ದರು.

ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ, ವಿಧಾನಪರಿಷತ್‌ ಸದಸ್ಯರ ನೇಮಕ ಸೇರಿ ವಿವಿಧ ವಿಷಯಗಳ ಬಗ್ಗೆ ರಾಹುಲ್‌ ಜೊತೆ ಚರ್ಚೆ ನಡೆಸಲು ಡಿಕೆಶಿ ಬಯಸಿದ್ದರು. ಈಗ ಮತ್ತೆ ತುರ್ತು ಬುಲಾಬ್‌ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!