ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೌಶಲ್ಯಾಭಿವೃದ್ಧಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಹೈಕೋರ್ಟ್ನಲ್ಲಿ ಬುಧವಾರ ನಡೆಯಿತು.
ಸಿಐಡಿ ಅಧಿಕಾರಿಗಳು ದಾಖಲಿಸಿರುವ ಪ್ರಕರಣ ಮತ್ತು ಎಸಿಬಿ ನ್ಯಾಯಾಲಯ ವಿಧಿಸಿರುವ ನ್ಯಾಯಾಂಗ ಬಂಧನವನ್ನು ರದ್ದುಪಡಿಸುವಂತೆ ನಾಯ್ಡು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಈ ಸಂಬಂಧ ಚಂದ್ರಬಾಬು ನಾಯ್ಡು ಅವರ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೇಳಿದೆ. ಇದಕ್ಕೆ ನ್ಯಾಯಾಲಯವು ಸೆಪ್ಟೆಂಬರ್ 18ರ ವರೆಗೆ ವರದಿ ಸಲ್ಲಿಸಲು ಗಡುವು ನೀಡಿದೆ. ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 19 ಮುಂದೂಡಿಕೆ ಮಾಡಿದೆ.
ಅಲ್ಲಿಯವರೆಗೆ ಎಸಿಬಿ ನ್ಯಾಯಾಲಯಕ್ಕೆ ಸಿಐಡಿ ಸಲ್ಲಿಸಿರುವ ನ್ಯಾಯಾಂಗ ಬಂಧನದ ಅರ್ಜಿಯನ್ನು ವಿಚಾರಣೆ ನಡೆಸದಂತೆ ಹೈಕೋರ್ಟ್ ಆದೇಶಿಸಿದೆ.
ಇದಕ್ಕೂ ಮುನ್ನಚಂದ್ರಬಾಬು ನಾಯ್ಡು ಅವರನ್ನು 5 ದಿನಗಳ ನ್ಯಾಯಾಂಗ ಬಂಧನ ಕೋರಿ ವಿಜಯವಾಡ ಎಸಿಬಿ ನ್ಯಾಯಾಲಯದಲ್ಲಿ ಸಿಐಡಿ ಅರ್ಜಿ ಸಲ್ಲಿಸಿತ್ತು.
ಇನ್ನರ್ ರಿಂಗ್ ರೋಡ್ ಪ್ರಕರಣ
ಚಂದ್ರಬಾಬು ನಾಯ್ಡು ವಿರುದ್ಧ ದಾಖಲಾಗಿದ್ದ ರಾಜಧಾನಿಯ ಇನ್ನರ್ ರಿಂಗ್ ರೋಡ್ ಪ್ರಕರಣದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯವು, ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿತು. ಈ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ನಾಯ್ಡು ಪರ ವಕೀಲರು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಗೃಹ ಬಂಧನ ಅರ್ಜಿಯನ್ನು ವಿಜಯವಾಡ ಎಸಿಬಿ ಕೋರ್ಟ್ ಮಂಗಳವಾರ ವಜಾಗೊಳಿಸಿತ್ತು