ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೋರಿ ಹಬ್ಬಕ್ಕೀಗ ಹೈಕೋರ್ಟ್ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ರಾಜ್ಯದಲ್ಲಿ ‘ಹೋರಿ ಹಬ್ಬ’ ಉತ್ಸವವನ್ನು ನಡೆಸಲು ಅನುಮತಿ ನೀಡಿದ್ದು, ಜಲ್ಲಿಕಟ್ಟು ವಿಷಯದಲ್ಲಿ ಸುಪ್ರೀಂ ಕೋರ್ಟ್ ವಿಧಿಸಿರುವ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿಸಿದೆ.
ಮುಖ್ಯವಾಗಿ ಹಾವೇರಿ, ಹಾನಗಲ್, ಹಿರೇಕೆರೂರು, ರಾಣೆಬೆನ್ನೂರು, ಬ್ಯಾಡಗಿ, ರಟ್ಟಿಹಳ್ಳಿ, ಶಿಕಾರಿಪುರ, ಆನವಟ್ಟಿ, ಶಿಗ್ಗಾವಿ, ಶಿರಸಿ, ಮುಂಡಗೋಡ, ಸವಣೂರು, ದಾವಣಗೆರೆ, ಹರಿಹರ, ಹೊನ್ನಾಳಿ, ಶಿವಮೊಗ್ಗ ಈ ಎಲ್ಲಾ ಭಾಗಗಳಲ್ಲಿ ದೀಪಾವಳಿ ಸಮಯದಲ್ಲಿ ಹೋರಿ ಬೆದರಿಸುವ ಸಂಪ್ರದಾಯ ನಡೆದುಕೊಂಡು ಬಂದಿದ್ದು, ಇದು ತಮಿಳುನಾಡಿನಲ್ಲಿ ಆಚರಿಸಲಾಗುವ ಜಲ್ಲಿಕಟ್ಟನ್ನು ಹೋಲುತ್ತದೆ. ಇದೀಗ ಹೋರಿ ಹಬ್ಬಕ್ಕೆ ಹೈ ಕೋರ್ಟ್ ಅನುಮತಿ ನೀಡಿದೆ .
ಸುಪ್ರೀಂ ಕೋರ್ಟ್ ಮತ್ತು ಈ ನ್ಯಾಯಾಲಯದ ವಿಭಾಗೀಯ ಪೀಠವು ಹೋರಿ ಹಬ್ಬಕ್ಕೆ ನೀಡಬೇಕಾದ ಅನುಮತಿಯು ಸುರಕ್ಷತಾ ಕ್ರಮಗಳು ಮತ್ತು ಪ್ರಾಣಿಗಳ ಭಾಗವಹಿಸುವಿಕೆ ಅಥವಾ ಬಳಕೆಯ ಕುರಿತು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಷರತ್ತುಗಳಿಗೆ ಕಟ್ಟುನಿಟ್ಟಾಗಿ ಅನುಗುಣವಾಗಿರಬೇಕು. ಇದು ಯಾವುದೇ ಸಂದರ್ಭದಲ್ಲಿ ಕಾಯ್ದೆಯ (ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ, 1960) ನಿಬಂಧನೆಗಳಿಗೆ ವಿರುದ್ಧವಾಗಿರಬಾರದು” ಎಂದು ನ್ಯಾಯಾಲಯ ಆದೇಶಿಸಿದೆ. ಅಲ್ಲದೇ ಹಬ್ಬದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದರೆ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

