ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಆಯುಕ್ತ ಡಿ ಬಿ ನಟೇಶ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಇಡಿ ಸಮನ್ಸ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಮುಡಾ ಹಗರಣದ ವಿಚಾರವಾಗಿ ಕಳೆದ 2024 ಅಕ್ಟೋಬರ್ 28 29 ರಂದು ಇಡಿ ಕಾನೂನುಬಾಹಿರವಾಗಿ ನನ್ನ ಹೇಳಿಕೆ ಪಡೆದಿದೆ ಎಂದು ಇಡಿ ಸಮನ್ಸ್ ರದ್ದುಗೊಳಿಸಿ ಎಂದು ನಟೇಶ ಅರ್ಜಿ ಸಲ್ಲಿಸಿದ್ದರು.
ಈ ಒಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಹೇಮಂತ್ ಚಂದನ್ ಗೌಡ ಅವರಿದ್ದ ಪೀಠ ಇಡಿ ಸಮನ್ಸ್ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.