ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ವಾನಗಳಲ್ಲಿಯೇ ಅತ್ಯಂತ ಅಪಾಯಕಾರಿ ಮತ್ತು ಕ್ರೂರವಾಗಿರುವ ತಳಿಗಳ ಸಂತಾನೋತ್ಪತಿಗೆ ಕೇಂದ್ರ ಸರ್ಕಾರ ನಿಷೇಧ ಹೇರಿತ್ತು.
ಆದರೆ ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬೆಂಗಳೂರು ನಿವಾಸಿಗಳಾದ ಕಿಂಗ್ ಸೋಲ್ಮನ್ ಡೇವಿಡ್ ಹಾಗೂ ಮರ್ಡೋನಾ ಜಾನ್ ಈ ಬಗ್ಗೆ ಅರ್ಜಿ ಸಲ್ಲಿಸಿದ್ದರು.
ಕೇಂದ್ರ ಸರ್ಕಾರದ ವಾದ ಆಲಿಸಿದ ಪೀಠ, ದೆಹಲಿ ಹೈಕೋರ್ಟ್ ಆದೇಶದಲ್ಲಿ ಅಪಾಯಕಾರಿ ಶ್ವಾನಗಳ ತಳಿ ನಿಷೇಧಿಸುವ ಕುರಿತಂತೆ ಸಂಬಂಧಪಟ್ಟ ಎಲ್ಲ ಪಾಲುದಾರರೊಂದಿಗೆ ಚರ್ಚಿಸಬೇಕು ಎಂದು ತಿಳಿಸಿದೆ. ಅದರಂತೆ, ಅವುಗಳಲ್ಲಿ ಕೆನ್ನೆಲ್ ಕ್ಲಬ್ ಆಪ್ ಇಂಡಿಯಾ ಕೂಡಾ ಒಂದಾಗಿದ್ದು, ಅದರ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿಲ್ಲ.
ಹೀಗಾಗಿ ಕೇಂದ್ರದ ಪರ ವಕೀಲರು ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸುವ ಸಂಬಂಧ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಪರಿಗಣಿಸಿರುವ ಎಲ್ಲ ಅಂಶಗಳಿರುವ ದಾಖಲೆಗಳನ್ನು ಸಲ್ಲಿಸಬೇಕು. ಅಲ್ಲಿಯವರೆಗೂ ಕರ್ನಾಟಕ ರಾಜ್ಯಕ್ಕೆ ಸೀಮಿತವಾಗುವಂತೆ ಸುತ್ತೋಲೆಗೆ ತಡೆ ನೀಡುತ್ತಿರುವುದಾಗಿ ಕೋರ್ಟ್ ಆದೇಶಿಸಿದೆ.