ಶಬರಿಮಲೆ ವಿಮಾನ ನಿಲ್ದಾಣ ಭೂಸ್ವಾಧೀನ ಅಧಿಸೂಚನೆಗೆ ಹೈಕೋರ್ಟ್ ಬ್ರೇಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಭಾರತದ ಪವಿತ್ರ ಪುಣ್ಯ ಕ್ಷೇತ್ರಗಳಲ್ಲಿ ಒಂದಾಗಿರುವ ಶಬರಿಮಲೆಯಲ್ಲಿ ಭಕ್ತರಿಗೆ ಅನುಕೂಲವಾಗುವಂತೆ ವಿಮಾನ ನಿಲ್ದಾಣ ನಿರ್ಮಿಸಲು ಭೂ ಸ್ವಾಧೀನ ಕುರಿತಾದ ಅಧಿಸೂಚನೆಗೆ ಹೈಕೋರ್ಟ್ ತಡೆ ನೀಡಿದ್ದು, ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಇಲ್ಲಿ ಒಟ್ಟು 441 ಹಿಡುವಳಿದಾರರ ಹೆಸರಿನಲ್ಲಿ 1000.28 ಹೆಕ್ಟೇರ್ ಭೂಮಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದನ್ನು ಆಕ್ಷೇಪಿಸಿ ಅರ್ಜಿ ಸಲ್ಲಿಸಲಾಗಿದ್ದು, ಸರ್ಕಾರದ ಅಧೀನದ ಸಂಸ್ಥೆಯಾದ ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಡೆವಲಪ್‌ಮೆಂಟ್ ಮೂಲಕ ಸಾಮಾಜಿಕ ಪರಿಣಾಮದ ಮೌಲ್ಯಮಾಪನ ನಡೆಸಲಾಗಿದ್ದು, ಇದು ಕೇಂದ್ರ ಮತ್ತು ರಾಜ್ಯ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು.

ಇದಲ್ಲದೆ ಚೆರುವಳ್ಳಿ ಎಸ್ಟೇಟ್ ಮಾಲೀಕತ್ವದ ಬಗ್ಗೆ ಕೂಡಾ ವಿವಾದವಿದೆ. ಆದರೆ ಇಲ್ಲಿ ಅರ್ಜಿದಾರರ ಹಕ್ಕು, ಅಯನಾ ಚಾರಿಟಬಲ್ ಟ್ರಸ್ಟ್, ಸರ್ಕಾರಿ ಸ್ವಾಮ್ಯದ ಜಮೀನಿನ ಹೆಸರಿನಲ್ಲಿ ಅಧಿಸೂಚನೆ ಹೊರಡಿಸಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!