ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಅವರು ರಾಜ್ಯ ಸರಕಾರ ಮಾಡಿದ್ದ ಗಡಿಪಾರು ಅದೇಶವನ್ನು ಪ್ರಶ್ನಿಸಿ ಹೈಕೋರ್ಟಿನಲ್ಲಿ ಸಲ್ಲಿಸಿದ್ದ ಆರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಗಡಿಪಾರು ಆದೇಶವನ್ನು ರದ್ದುಪಡಿಸಿದೆ.
ಭರತ್ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಆಲಿಸಿದ ಕರ್ನಾಟಕ ಉಚ್ಚ ನ್ಯಾಯಾಲಯ ಹಿಂದೂಪರ ಹೋರಾಟಗಾರ ಭರತ್ ಕುಮ್ದೇಲು ಗಡೀಪಾರು ಆದೇಶ ರದ್ದುಪಡಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಏಕ ಸದಸ್ಯ ಪೀಠ ಆದೇಶ ಮಾಡಿದೆ.