ಜೆಡಿಎಸ್‌ ಶಾಸಕ ಗೌರಿಶಂಕರ್‌ ಶಾಸಕತ್ವದಿಂದ ಅನರ್ಹ : ಹೈಕೋರ್ಟ್‌ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಚುನಾವಣಾ ಅಕ್ರಮ ಆರೋಪ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಜೆಡಿಎಸ್‌ ಶಾಸಕ ಗೌರಿ ಶಂಕರ್‌ ಅವರನ್ನು ರಾಜ್ಯ ಹೈಕೋರ್ಟ್‌ ಶಾಸಕತ್ವದಿಂದ ಅನರ್ಹಗೊಳಿಸಿದೆ.

ಬಿಜೆಪಿಯ ಪರಾಜಿತ ಅಭ್ಯರ್ಥಿ ಬಿ.ಸುರೇಶ್‌ ಗೌಡ ಸಲ್ಲಿಸಿದ್ದ ಚುನಾವಣಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಸುನೀಲ್‌ ದತ್‌ ಯಾದವ್‌ ಅವರ ನೇತೃತ್ವದ ಏಕಸದಸ್ಯ ಪೀಠದಿಂದ ಆದೇಶ ಹೊರಡಿಸಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿರುವುದರಿಂದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಆದೇಶಕ್ಕೆ ತಡೆ ನೀಡುವಂತೆ ಗೌರಿಶಂಕರ್‌ ಪರ ವಕೀಲರು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!