ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ತಮ್ಮ ವಿರುದ್ಧ ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ವಿಚಾರಣೆಯ ಎಫ್‌ಐಆರ್ ರದ್ದು ಕೋರಿದ್ದ ಡಿಸಿಎಂ ಅವರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ. ತನಿಖೆಗೆ ನೀಡಿದ್ದ ಮಧ್ಯಂತರ ತಡೆ ಕೂಡ ತೆರವು ಮಾಡಲಾಗಿದೆ.
2014-15ರಲ್ಲಿ ಆಸ್ತಿ ಗಳಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಡಿಕೆಶಿ ವಿರುದ್ಧ ಸಿಬಿಐ ಕೇಸ್ ದಾಖಲಿಸಿ ತನಿಖೆ ಆರಂಭಿಸಿತ್ತು.