Wednesday, February 28, 2024

ಖಾಸಗಿ ಬಸ್‌ಗಳಿಗೂ ಶಕ್ತಿ ಯೋಜನೆಯನ್ನು ವಿಸ್ತರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ನೀಡಲಾಗುವ ಮಹಿಳೆಯರಿಗೆ ಉಚಿತ ಪ್ರಯಾಣ(Free Bus Travel For Women) ಶಕ್ತಿ ಯೋಜನೆಯನ್ನು (Shakti Scheme) ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ (Karnataka High Court) ನಿರ್ದೇಶನ ನೀಡಿದೆ.

ಅರ್ಜಿದಾರರ ಮನವಿಯನ್ನು ಕಾನೂನು ಪ್ರಕಾರ ಎರಡು ತಿಂಗಳೊಳಗೆ ಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ.

ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ಕೋರಿ ಕಾರ್ಕಳದ ಖಾಸಗಿ ಬಸ್ ನಿರ್ವಾಹಕ ಶರತ್ ಕುಮಾರ್ ಶೆಟ್ಟಿ ಅವರು ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

‘ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಖಾಸಗಿ ಬಸ್ ನಿರ್ವಾಹಕರು ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಖಾಸಗಿ ಬಸ್ ನಿರ್ವಾಹಕರಿಗೂ ಯೋಜನೆ ಅನ್ವಯವಾಗಬೇಕು. ಸರ್ಕಾರಿ ಬಸ್​​ಗಳಂತೆ ಮಹಿಳೆಯರ ಪ್ರಯಾಣ ವೆಚ್ಚವನ್ನು ಖಾಸಗಿ ಬಸ್ ನಿರ್ವಾಹಕರಿಗೆ ಮರುಪಾವತಿ ಮಾಡಬೇಕು’ ಎಂದು ಶರತ್ ಅವರು ಹೈಕೋರ್ಟ್​ಗೆ ಸಲ್ಲಿಸಿದ ಅರ್ಜಿಯಲ್ಲಿ ಮನವಿ ಮಾಡಿದ್ದರು.

ಜುಲೈನಲ್ಲಿ ಈ ಬಗ್ಗೆ ಸಲ್ಲಿಸಿದ ಮನವಿಯನ್ನು ಪರಿಗಣಿಸಲು ರಾಜ್ಯ ಸರ್ಕಾರ ಮತ್ತು ಆರ್‌ಟಿಒಗೆ ನಿರ್ದೇಶಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು.

ಕರ್ನಾಟಕದಲ್ಲಿ ಸುಮಾರು 75,000 ಕಾರ್ಮಿಕರು ಖಾಸಗಿ ಬಸ್‌ಗಳನ್ನು ಅವಲಂಬಿಸಿದ್ದಾರೆ. ಖಾಸಗಿ ಬಸ್ ನಿರ್ವಾಹಕರಿಂದ ರಾಜ್ಯ ಸರ್ಕಾರ 1620 ಕೋಟಿ ರೂಪಾಯಿ ತೆರಿಗೆ ಸಂಗ್ರಹಿಸುತ್ತದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!