Monday, December 4, 2023

Latest Posts

ಶಾಸಕ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಿಜೆಪಿ ಮುಖಂಡ ಯೋಗೀಶ್ ಗೌಡರ್ (Yogesh Gowda Murder Case) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ಶನಿವಾರ ಹೈಕೋರ್ಟ್ ವಜಾಗೊಳಿಸಿದೆ.

ಶಾಸಕನಾಗಿರುವ ಕಾರಣಕ್ಕೆ ಕ್ಷೇತ್ರಕ್ಕೆ ಭೇಟಿಗೆ ಅವಕಾಶ ಕೋರಿದ್ದರು. ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದಾಗಲೂ ಷರತ್ತು ಸಡಿಲಿಸಿಲ್ಲ. ಚುನಾವಣೆ ವೇಳೆಯೂ ಕ್ಷೇತ್ರ ಭೇಟಿಗೆ ಅನುಮತಿ ನಿರಾಕರಿಸಲಾಗಿದೆ. ಇದೀಗ ನ್ಯಾ. ಎಂ. ನಾಗಪ್ರಸನ್ನರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!