ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಪ್ರಶ್ನಿಸಿ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆಯನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸನತ್ ಕುಮಾರ್ ಶೆಟ್ಟಿ ಎಂಬುವರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ್ ನ್ಯಾಯಪೀಠ , ಮೆಟ್ರೋ ಆಡಳಿತ ಮಂಡಳಿಗೆ ದರ ಏರಿಕೆ ಅಧಿಕಾರವಿದೆ. ತಜ್ಞರು ಕೈಗೊಳ್ಳುವ ತೀರ್ಮಾನಗಳಲ್ಲಿ ಕೋರ್ಟ್ ಮಧ್ಯಪ್ರವೇಶ ಸಾಧ್ಯವಿಲ್ಲ. ದರ ನಿಗದಿ ಸಮಿತಿಯೇ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ನಮ್ಮ ಮೆಟ್ರೋದ ಪ್ರಯಾಣದರವನ್ನು ಏರಿಕೆಯಾಗುತ್ತಿದ್ದಂತೆ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿತ್ತು.