ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.
ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಗುತ್ತಿಗೆದಾರ ಸಂತೋಷ್, ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಿನ ಸಚಿವರಾಗಿದ್ದ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಸಿಎಂ (ಬಸವರಾಜ ಬೊಮ್ಮಾಯಿ ಅವಧಿ) ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ತೆರಳಿದ್ದರು. ಈ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದರು. ಇದನ್ನ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು. ಸದ್ಯ ಹೈಕೋರ್ಟ್‌ನಿಂದ ಪ್ರಕರಣಕ್ಕೆ ಸಂಬಂಧಿಸಿ ಮಧ್ಯಂತರ ತಡೆ ಸಿಕ್ಕಿದೆ.