ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ ಬಿಗ್ ರಿಲೀಫ್ ನೀಡಿದ್ದು, ಅವರ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿ, ಭಾಷಣ ಮಾಡಿದಂತ ಆರೋಪದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.ನಂತರ ನಡ್ಡಾ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಪ್ರಕರಣವನ್ನು ಇಂದು ಹೈಕೋರ್ಟ್ ರದ್ದುಗೊಳಿಸಿದೆ.
ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯಲ್ಲಿ ಪ್ರಚಾರ ಭಾಷಣದ ಸಂದರ್ಭದಲ್ಲಿ ಜೆ.ಪಿ ನಡ್ಡಾ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಭಾಷಣ ಮಾಡಿದ್ದಾರೆ ಎಂದು ದೂರು ನೀಡಲಾಗಿತ್ತು.