ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಬೈಕ್ ಟ್ಯಾಕ್ಸಿಗಳ ಮೇಲ್ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ.
ಬೈಕ್ ಟ್ಯಾಕ್ಸಿಗೆ ಕಾನೂನಿನಡಿ ಸರ್ಕಾರ ಅನುಮತಿ ನೀಡಬೇಕು ಎಂದು ಹೈಕೋರ್ಟ್ ಹೇಳಿದೆ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಎತ್ತಿಹಿಡಿದಿತ್ತು. ಆದರೆ ಇದೀಗ ವಿಭಾಗೀಯ ವೀಠ ಆದೇಶ ರದ್ದುಗೊಳಿಸಿ, ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ.
ಒಲಾ, ಊಬರ್ ಮತ್ತಿತರ ಅಗ್ರಿಗೇಟರ್ ಗಳು ಸಲ್ಲಿಸಿದ ಮೇಲ್ಮನವಿಗಳನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠ ಮಾನ್ಯ ಮಾಡಿದೆ. ಬೈಕ್ ಮಾಲಕರು ಅಥವಾ ಅಗ್ರಿಗೇಟರ್ ಗಳು ಸಾರಿಗೆ ವಾಹನಗಳನ್ನಾಗಿ ಬಳಸಲು ಅನುಮತಿ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು. ಅರ್ಹ ಮನವಿಗಳನ್ನು ಸರ್ಕಾರ ಪುರಸ್ಕರಿಸಿ ಅನುಮತಿ ನೀಡಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿದೆ. ಇದರಿಂದ ಬೆಂಗಳೂರಿನ ಪ್ರಯಾಣಿಕರು ಇದೀಗ ಬೈಕ್ ಟ್ಯಾಕ್ಸಿ ಮೂಲಕ ಪ್ರಯಾಣಕ್ಕೆ ಅವಕಾಶ ನೀಡಿದೆ. ಇಷ್ಟೇ ಅಲ್ಲ ಒಂದೆಡೆ ಮೆಟ್ರೋ ದರ ಏರಿಕೆ, ಪ್ರಯಾಣ ಏರಿಕೆಯಿಂದ ಬೆಂಗಳೂರು ಪ್ರಯಾಣಿಕರಿಗೆ ಬೈಕ್ ಟ್ಯಾಕ್ಸಿ ವರವಾಗಲಿದೆ.


