ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೊಲೀಸರು ಹಾಗೂ ವಕೀಲರ ನಡುವೆ ಗಲಾಟೆ ಪ್ರಕರಣ ಸಂಬಂಧ ವಕೀಲರ ವಿರುದ್ಧ ದಾಖಲಾಗಿದ್ದ ಮೂರು ಪ್ರಕರಣಗಳಿಗೆ ಹೈಕೋರ್ಟ್ (Karnataka High Court) ಮಧ್ಯಂತರ ತಡೆ ನೀಡಿ ಆದೇಶಿಸಿದೆ.
ಹೆಲ್ಮೆಟ್ ವಿಚಾರವಾಗಿ ಪೊಲೀಸ್ ಸಿಬ್ಬಂದಿಗಳು ವಕೀಲ ಪ್ರೀತಂ ಎಂಬುವವರ ಮೇಲೆ ಹಲ್ಲೆ ನಡೆಸಿದ್ದರು. ಪ್ರಕರಣ ಸಂಬಂಧ ಚಿಕ್ಕಮಗಳೂರು ಠಾಣೆಯ ಪಿಎಸ್ ಐ ಸೇರಿ 6 ಸಿಬ್ಬಂದಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. 6 ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿತ್ತು.
ವಕೀಲನ ಮೇಲೆ ಹಲ್ಲೆ ಪ್ರಕರಣ ಖಂಡಿಸಿ ವಕೀಲರು ಪೊಲೀಸ್ ಠಾಣೆಗೆ ನುಗ್ಗಿ ಪ್ರತಿಭಟನೆ ನಡೆಸಿದ್ದರು. ವಕೀಲರು ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸರು ಹಾಗೂ ಅವರ ಕುಟುಂಬದವರು ಚಿಕ್ಕಮಗಳೂರು ನಗರದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ 15 ವಕೀಲರ ವಿರುದ್ಧ ಎಫ್ ಐ ಆರ್ ಕೂಡ ದಾಖಲಾಗಿತ್ತು.
ಎಫ್ ಐ ಆರ್ ರದ್ದು ಕೋರಿ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಮೂರು ಎಫ್ ಐ ಆರ್ ಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.