ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಉಪೇಂದ್ರಗೆ ಬಿಗ್ ರಿಲೀಫ್ ಸಿಕ್ಕಿದ್ದು, ತಮ್ಮ ಮೇಲೆ ದಾಖಲಾಗಿದ್ದ ಎಫ್.ಐ.ಆರ್.ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಈ ಹಿಂದೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್.ಐ.ಆರ್. ರದ್ದುಗೊಳಿಸುವಂತೆ ಉಪೇಂದ್ರ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿದ್ದ ಎಫ್.ಐ.ಆರ್ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದೀಗ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್.ಐ.ಆರ್ಗೂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಪರಿಶಿಷ್ಟ ಸಮುದಾಯದ ಬಗ್ಗೆ ಅವಹೇಳನಾಕಾರಿ ಹೇಳಿಕ ನೀಡಿದ ಹಿನ್ನೆಲೆಯಲ್ಲಿ ಉಪೇಂದ್ರ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ನಟ ಉಪೇಂದ್ರ ತಕ್ಷಣವೇ ವಿಡಿಯೋ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದರು.