Monday, November 17, 2025

‘ನಿರ್ಬಂಧ’ಕ್ಕೆ ಹೈಕೋರ್ಟ್ ಮಧ್ಯಂತರ ತಡೆ: ಸಿಎಂ ಸಿದ್ದರಾಮಯ್ಯ ಕೊಟ್ರು ಫಸ್ಟ್ ರಿಯಾಕ್ಷನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸರಕಾರಿ ಸ್ಥಳಗಳಲ್ಲಿ ಖಾಸಗಿ ಸಂಘಸಂಸ್ಥೆಗಳು ಕಾರ್ಯಕ್ರಮ ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂಬ ‌ರಾಜ್ಯ ಸರಕಾರ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇದೀಗ ಧಾರವಾಡ ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಧಾನಸೌಧದಲ್ಲಿ ಮಾತನಾಡಿದ ಸಿಎಂ, ತಡೆಯಾಜ್ಞೆ ತೆರವಿಗೆ ಕಾನೂನು ಹೋರಾಟ ನಡೆಸೋದಾಗಿ ಹೇಳಿದ್ದಾರೆ.

ಗೃಹಸಚಿವ ಪರಮೇಶ್ವರ್ ಮಾತನಾಡಿ, ಸರ್ಕಾರ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಿದೆ. ಸಿಎಂ ಕೂಡಾ ಹೇಳಿದ್ದಾರೆ, ಇದು ಸರ್ಕಾರಕ್ಕೆ ಹಿನ್ನಡೆ ಅಲ್ಲ. ನಾವು ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

error: Content is protected !!