ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪ್ರಾಥಮಿಕ ಶಾಲಾ ಶಿಕ್ಷಕರ(primary school teachers) ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ.

ಮುಖ್ಯ ನ್ಯಾಯಾಧೀಶರಾದ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಎಂ.ಜಿ ಎಸ್ ಕಮಲ್​ರಿದ್ದ ವಿಭಾಗೀಯ ಪೀಠವು, ಏಕಸದಸ್ಯ ಪೀಠದ ಆದೇಶ ರದ್ದುಪಡಿಸಿ, ಮಾ.8, 2023 ರ ಆಯ್ಕೆ ಪಟ್ಟಿಯಂತೆ 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಸೂಚಿಸಿದೆ.

6 ರಿಂದ 8 ನೇ ತರಗತಿಗಳಿಗೆ ಶಿಕ್ಷಕರ ಕೊರತೆ ಇರುವುದನ್ನು ಪರಿಗಣಿಸಿ ಈ ಆದೇಶ ಹೊರಡಿಸಿದೆ.

ಈ ಹಿಂದೆ ನೇಮಕಾತಿ ಮರುರೂಪಿಸಲು ಸೂಚಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ವಿಭಾಗೀಯ ಪೀಠ ರದ್ದುಪಡಿಸಿದೆ. ಸರ್ಕಾರದ ಅಧಿಸೂಚನೆಯಂತೆ ಆದಾಯ ಪ್ರಮಾಣಪತ್ರ ಸಲ್ಲಿಸಿದವರ ಆಯ್ಕೆ ಅಂತಿಮಗೊಳಿಸಲು ಹಾಗೂ ನಿಗದಿತ‌ ನಮೂನೆಯಲ್ಲಿ ಅರ್ಜಿ ಸಲ್ಲಿಸದ ಅಭ್ಯರ್ಥಿಗಳ ಆಯ್ಕೆಯನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ ಆದೇಶದವರೆಗೆ ಮುಂದೂಡುವಂತೆ ಸೂಚಿಸಿದೆ.‌ ನೊಂದ ಅಭ್ಯರ್ಥಿಗಳು ಕೆಎಸ್ಎಟಿಯಲ್ಲಿ ದಾವೆ ಹೂಡಬಹುದು. ಆ ದಾವೆ ಇತ್ಯರ್ಥವಾಗುವವರೆಗೆ ನಿಗದಿತ ನಮೂನೆಯಲ್ಲಿ ಆದಾಯ ಪ್ರಮಾಣಪತ್ರ ಸಲ್ಲಿಸದ ಅಭ್ಯರ್ಥಿಗಳ ಆಯ್ಕೆ ಮುಂದೂಡುವಂತೆ ಸೂಚನೆ ನೀಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!