ಸಂದೇಶಖಾಲಿ ಪ್ರಕರಣ ಸಿಬಿಐಗೆ ಒಪ್ಪಿಸಿದ ಹೈಕೋರ್ಟ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದೀದಿ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಸಂದೇಶ್‌ಖಾಲಿಯ ಇಡಿ ಅಧಿಕಾರಿಗಳ ಮೇಲಿನ ದಾಳಿ ಪ್ರಕರಣವನ್ನು ಕೋಲ್ಕತ್ತಾ ಹೈಕೋರ್ಟ್ ಮಂಗಳವಾರ ಸಿಬಿಐ ತನಿಖೆಗೆ ಆದೇಶಿಸಿದೆ. ಇದೀಗ ಸಿಬಿಐ ತನಿಖೆಗೆ ವಿರೋಧ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಸರ್ಕಾರ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.

ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ನೇತೃತ್ವದ ವಿಭಾಗೀಯ ಪೀಠ ಇಂದು ಸಂದೇಶ್‌ಖಾಲಿ ಹಿಂಸಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿದೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಹಾಗೂ ಪ್ರಮುಖ ಆರೋಪಿ ಷಹಜಹಾನ್ ಶೇಖ್‌ನನ್ನು ಸಂಜೆ 4.30 ರೊಳಗೆ ಕೇಂದ್ರ ತನಿಖಾ ಸಂಸ್ಥೆಗೆ ಹಸ್ತಾಂತರಿಸುವಂತೆ ರಾಜ್ಯ ಪೊಲೀಸರಿಗೆ ಸೂಚಿಸಿದೆ.

ಇದರ ಬೆನ್ನಲ್ಲೇ ಹೈಕೋರ್ಟ್ ಆದೇಶ ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದು, ತುರ್ತು ವಿಚಾರಣೆ ಕೋರಿದ್ದಾರೆ. ಆದರೆ ಪೀಠ ಅರ್ಜಿಯ ತುರ್ತು ವಿಚಾರಣೆ ನಿರಾಕರಿಸಿದ್ದು, ಈ ವಿಷಯವನ್ನು ಉನ್ನತ ನ್ಯಾಯಾಲಯದ ರಿಜಿಸ್ಟ್ರಾರ್ ಜನರಲ್ ಮುಂದೆ ಪ್ರಸ್ತಾಪಿಸುವಂತೆ ಸಿಂಘ್ವಿಗೆ ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!