ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣ ವಿಚಾರವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿರುವ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಇದೀಗ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಆದೇಶದ ಬಗ್ಗೆ ಸ್ಪಷ್ಟನೆ ನೀಡಿದ್ದು, ಹೈಕೋರ್ಟ್ ಆದೇಶವನ್ನು ನಾನು ಪೂರ್ತಿಯಾಗಿ ಓದಿಲ್ಲ. ಸಂಪೂರ್ಣವಾಗಿ ಓದಿದ ಬಳಿಕ ಪ್ರತಿಕ್ರಿಕೆ ಕೊಡುತ್ತೇನೆ. ಆದರೆ ಹೈಕೋರ್ಟ್ ಪ್ರಾಸಿಕ್ಯೂಷನ್ ಗೆ ಆದೇಶವನ್ನು ನೀಡಿಲ್ಲ. ಪ್ರಾಥಮಿಕ ತನಿಖೆಗೆ ಮಾತ್ರ ಆದೇಶ ನೀಡಿದೆ ಎಂದು ಹೇಳಿದರು.
BNSS 218ರ ಪ್ರಕಾರ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿಲ್ಲ. BNSS 218ನ್ನು ಹೈಕೋರ್ಟ್ ಸಂಪೂರ್ಣವಾಗಿ ತಿರಸ್ಕರಿಸಿದೆ. 17 ಎ ಪ್ರಕಾರ ತನಿಖೆಗೆ ಆದೇಶ ನೀಡಿದೆ. ಪ್ರಾಥಮಿಕ ತನಿಖೆಗೆ ಮಾತ್ರ ನ್ಯಾಯಮೂರ್ತಿಗಳು ಅನುಮತಿ ನೀಡಿದ್ದಾರೆ ಎಂದು ತಿಳಿಸಿದರು.
ಬಿಜೆಪಿಯವರ ಒಳ ಸಂಚು, ರಾಜ್ಯಪಾಲರ ದುರುಪಯೋಗಕ್ಕೆ ನಾನು ಹೆದರಲ್ಲ. ಕರ್ನಾಟಕದ ಜನ, ಕಾಂಗ್ರೆಸ್ ಪಕ್ಷ ನನ್ನ ಜೊತೆಗಿದೆ. ನಾನು ರಾಜೀನಾಮೆ ಕೊಡಲ್ಲ. ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಕಾನೂನು ಹೋರಾಟಕ್ಕೆ ಹೈಕಮಾಂಡ್ ಸಲಹೆ ನೀಡಿದೆ. ನಮ್ಮ ಎಲ್ಲಾ ಸಚಿವರು, ಡಿಸಿಎಂ, ಶಾಸಕರು ನನ್ನ ಜೊತೆಗಿದ್ದಾರೆ. ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.