ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ವಿರುದ್ಧದ ಎಫ್​ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ನಗರ್ತಪೇಟೆಯಲ್ಲಿ ಮುಖೇಶ್ ಎಂಬ ಯುವಕನ ಮೇಲೆ ಹಲ್ಲೆ ಖಂಡಿಸಿ ನಡೆಸಿದ್ದ ಪ್ರತಿಭಟನೆ ಸಂಬಂಧ ಸಂಸದ ತೇಜಸ್ವಿ ಸೂರ್ಯ (Tejasvi Surya), ಶೋಭಾ ಕರಂದ್ಲಾಜೆ ವಿರುದ್ಧದ ಕೇಸ್‌ಗೆ ಕರ್ನಾಟಕ ಹೈಕೋರ್ಟ್(Karnataka High Court )​ ಮಧ್ಯಂತರ ತಡೆ ನೀಡಿದೆ.

ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಎಂಬುವರ ಮೇಲೆ ನಡೆದಿದ್ದ ಹಲ್ಲೆ ಖಂಡಿಸಿ ಕಳೆದ ಮಂಗಳವಾರ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ತೇಜಸ್ವಿ ಸೂರ್ಯ, ಮತೀಯ ಭಾವಣೆ ಕೆರಳಿಸುವಂತೆ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಚಿಕ್ಕಪೇಟೆ ನಿವಾಸಿಯೊಬ್ಬರು ಚುನಾವಣಾಧಿಕಾರಿಗೆ ದೂರು ನೀಡಿದ್ದರು. ಬಳಿಕ ಆಯೋಗದ ಸೂಚನೆ ಮೇರೆಗೆ ಹಲಸೂರು ಗೇಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದ್ರೆ, ಇದೀಗ ಈ ಪ್ರಕರಣವನ್ನು ರದ್ದು ಕೋರಿ ತೇಜಸ್ವಿ ಸೂರ್ಯ, ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣಕ್ಕೆ ಹೈಕೋರ್ಟ್​, ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

ಇನ್ನು ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತ ಆರೋಪಿಯನ್ನು ತಮಿಳುನಾಡಿಗೆ ಲಿಂಕ್ ಮಾಡಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ(Shobha Karandlaje) ವಿರುದ್ಧದ ಎಫ್‌ಐಆರ್​ಗೂ ಹೈಕೋರ್ಟ್ ತಡೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!