ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಮಾಜಿ ಸಿಎಂ, ದಿವಂಗತ ಜಯಲಲಿತಾ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಪ್ತಿ ಮಾಡಲಾಗಿದ್ದ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂದಿರುಗಿಸುವುದಕ್ಕೂ ಈ ಹಿಂದೆ ಹೈಕೋರ್ಟ್ ಆದೇಶಿಸಿತ್ತು. ಆದ್ರೆ ಇದೀಗ ಮಧ್ಯಂತರ ತಡೆಯಾಜ್ಞೆಯನ್ನು ವಿಧಿಸಿದೆ.
ದಿ.ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜಪ್ತಿ ಮಾಡಲಾಗಿದ್ದ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಮಾರ್ಚ್.5, 6ರೊಳೆಗೆ ಹಿಂದಿರುಗಿಸುವಂತೆ ಹೈಕೋರ್ಟ್ ಸೂಚಿಸಿತ್ತು.ಈ ಆದೇಶಕ್ಕೆ ಮೇಲ್ಮನವಿಯನ್ನು ಸಲ್ಲಿಸಿದ್ದ ಜಯಲಲಿತಾ ವಾರಸುದಾರೆ ಜೆ.ದೀಪಾ ಅವರ ಪರ ವಕೀಲರು, ವಿಶೇಷ ಕೋರ್ಟ್ ಆದೇಶದಿಂದ ತಮ್ಮ ಹಕ್ಕಿಗೆ ದಕ್ಕೆಯಾಗಿದೆ ಎಂಬುದಾಗಿ ಕೋರಿದ್ದರು.
ಈ ವಾದವನ್ನು ಪರಿಗಣಿಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂದುರಿಗಿಸುವ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ.