ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ಜಿಲ್ಲೆಯ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಇದೇ ಜುಲೈ.14ರಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಈ ನಡುವೆ ಸೇತುವೆಗೆ ಸಿಗಂದೂರು ಚೌಡೇಶ್ವರಿ ಅಂತ ಹೆಸರಿಡಿ ಎಂಬುದಾಗಿ ಒಂದಷ್ಟು ಜನರು ಆಗ್ರಹಿಸಿದ್ದಾರೆ. ಮತ್ತೊಂದೆಡೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೆಸರಿಡುವಂತೆ ಕೋರಿ ಹೈಕೋರ್ಟ್ ಗೆ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದಾರೆ.
ಶಿವಮೊಗ್ಗದ ಬಿದರಿ ಗ್ರಾಮದ ನಿವಾಸಿ ಕೆ.ಹರನಾಥ್ ರಾವ್ ಎಂಬುವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರು, ಈ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೊಟೀಸ್ ಜಾರಿಗೊಳಿಸಿ ವಿಚಾರಣೆಯನ್ನು ಜುಲೈ.17ಕ್ಕೆ ಮುಂದೂಡಿದ್ದಾರೆ.